ಬೆಂಗಳೂರು: ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2026ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 11.10.2026ರಿಂದ 20.10.2026ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2026”ನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿ.ಸಿ. ಕಚೇರಿ ಎದುರು, ಮೈಸೂರು ಇಲ್ಲಿ ಏರ್ಪಡಿಸಲಾಗುವುದು.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1000-00 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಅಂದರೆ https://kpp.karnataka.gov.inನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:05.10.2026ರಂದು ಸಂಜೆ 5.00ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ನೊಂದಾಯಿತ ಅಂಚೆ ಅಥವಾ ಮುದ್ದಾಂ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ದೂ:080-22484516 ಅನ್ನು ಸಂಪರ್ಕಿಸಬಹುದು.




