ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿನಿಯರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ಅಭಿನಂದನೆ ಸಲ್ಲಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹುಬ್ಬಳ್ಳಿಯ ಭೈರಿದೇವರಕೊಪ್ಪದ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ವಿದ್ಯಾಲಕ್ಷ್ಮಿ 600ಕ್ಕೆ 598 ಅಂಕ (ಶೇ.99.66) ಪಡೆದು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಧಾರವಾಡದ ಮಾಳಮಡ್ಡಿಯ ಕೆಇಬಿ ಸಂಯುಕ್ತ ಪಿಯು ಕಾಲೇಜಿನ ವಿದ್ಯಾರ್ಥಿನಿ ರವೀನಾ ಲಮಾಣಿ 595(ಶೇ.99.16) ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿನಿ ಎಂ. ಜ್ಞಾನವಿ 600 ಅಂಕಗಳಿಗೆ 597 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ, ಮಂಗಳೂರಿನ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ 596 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಇದೇ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ 594 ಅಂಕ ಗಳಿಸಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಶಿವಮೊಗ್ಗದ ಡಿವಿಎಸ್ ಕಾಲೇಜಿನ ವಿದ್ಯಾರ್ಥಿನಿ ಕೆ.ಸಿ. ಚುಕ್ಕಿ 600ಕ್ಕೆ 593 ಅಂಕ ಗಳಿಸಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ ಎಂದಿದ್ದಾರೆ.
ಸಾಧನೆ ಮಾಡಿದ ಈ ಮೇಲಿನ ಎಲ್ಲಾ ವಿದ್ಯಾರ್ಥಿನಿಯರಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ವತಿಯಿಂದ ಅಭಿನಂದನೆ ತಿಳಿಸಿದ್ದು, ಉತ್ತೀರ್ಣರಾದ ಕರ್ನಾಟಕ ರಾಜ್ಯದ ಸಮಸ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೂ ಅವರ ಮುಂದಿನ ಭವಿಷ್ಯ ಉಜ್ವಲವಾಗಿರಲೆಂದು ಶುಭಾಶಯಗಳನ್ನು ಕೋರಿದ್ದಾರೆ.




