ಬೆಂಗಳೂರು: ಗುರುತು ಮರೆಮಾಚಲು ಖತರ್ನಾಕ್ ಕಳ್ಳನೊಬ್ಬ ಸಂಪೂರ್ಣ ಬೆತ್ತಲೆಯಾಗಿ ಮುಖಕ್ಕೆ ಮಾಸ್ಕ್ ಧರಿಸಿ ಮೊಬೈಲ್ ಅಂಗಡಿಗೆ ನುಗ್ಗಿ 85 ಕ್ಕೂ ಹೆಚ್ಚು ಮೊಬೈಲ್ ಗಳನ್ನು ದೋಚಿ ಪರಾರಿಯಾಗಿದ್ದಾನೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮುಖಕ್ಕೆ ಮಾಸ್ಕ್ ಧರಿಸಿ ಬೆತ್ತಲೆಯಾಗಿ ಬಂದು ಕಳೆದ 8 ರಂದು ರಾತ್ರಿ ಬೊಮ್ಮನಹಳ್ಳಿಯ ಹೊಂಗಸಂದ್ರದ ಟೆಲಿಕಾಂ ಮೊಬೈಲ್ ಅಂಗಡಿ) ಶಾಪ್‌ನ ಗೋಡೆ ಕೊರೆದು ಆಮೂಲಕ ಒಳನುಗ್ಗಿ ವಿವಿಧ ಕಂಪನಿಯ 85 ಮೊಬೈಲ್‌ಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾನೆ.
ಮಾರನೇ ದಿನ ಬೆಳಗ್ಗೆ ಅಂಗಡಿ ಮಾಲೀಕ ಎಂದಿನಂತೆ ಬಂದು ಅಂಗಡಿ ಬೀಗ ತೆಗೆದು ಒಳಗೆ ಹೋದಾಗ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿರುವುದು ಗಮನಿಸಿದಾಗ ಗೋಡೆ ಕೊರೆದು ಒಳನುಗ್ಗಿ ಮೊಬೈಲ್‌ಗಳ ಕಳ್ಳತನವಾಗಿರುವುದು ಗೊತ್ತಾಗಿದೆ.
ತಕ್ಷಣ ಅವರು ಸಿಸಿ ಕ್ಯಾಮೆರಾ ನೋಡಿದಾಗ ಕಳ್ಳ ಬೆತ್ತಲೆಯಾಗಿ ಬಂದು ಮೊಬೈಲ್‌ಗಳನ್ನು ಕಳ್ಳತನ ಮಾಡಿರುವ ದೃಶ್ಯ ಸೆರೆಯಾಗಿದೆ.
ಈ ಖತರ್ನಾಕ್ ಕಳ್ಳ ತನ್ನ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗುತ್ತದೆ. ಬಟ್ಟೆ ಜಾಡುಹಿಡಿದು ನನ್ನನ್ನು ಪೊಲೀಸರು ಬಂಧಿಸುತ್ತಾರೆ ಎಂದು ತಿಳಿದು ಪೊಲೀಸರ ತನಿಖೆಯ ಹಾದಿ ತಪ್ಪಿಸಿಲು ಬೆತ್ತಲೆಯಾಗಿ ಕಳ್ಳತನ ಮಾಡಿರುವುದು ಗೊತ್ತಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೊಮ್ಮನಹಳ್ಳಿ ಠಾಣೆ ಪೊಲೀಸರು ಬೆತ್ತಲೆ ಕಳ್ಳನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.




