ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಶುಕ್ರವಾರ ದಿನಾಂಕ 21-7-2023 ಸಂಜೆ 5:00 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಪರಿಷತ್ತಿನ ಅಧ್ಯಕ್ಷರಾದ ಡಾ ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರತಿಮೆ ಅನಾವರಣವನ್ನು ಮುಖ್ಯಮಂತ್ರಿಗ ಸಿದ್ದರಾಮಯ್ಯ ಹಾಗೂ ಮೈಸೂರಿನ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪುತ್ಥಳಿಯನ್ನು ಅನಾವರಣ ಮಾಡಲಿದ್ದಾರೆ. ಗೌರವ ಅತಿಥಿಗಳಾಗಿ ವಿಶ್ರಾಂತ ನ್ಯಾಯಮೂರ್ತಿಗಳಾದ ಶಿವರಾಜ್ ವಿ ಪಾಟೀಲ್, ಮುಖ್ಯ ಅತಿಥಿಗಳಾಗಿ ಸಚಿವರಾದ ಶಿವರಾಜ ತಂಗಡಗಿ, ಬಿ ಜಡ್ ಜಮೀರ್ ಅಹ್ಮದ್ ಖಾನ್ ಭಾಗವಹಿಸಲಿದ್ದಾರೆ ಹಾಗೂ ಗೌರವ ಉಪಸ್ಥಿತಿಯಲ್ಲಿ ಹಿರಿಯ ಸಾಹಿತಿ ಡಾ ದೊಡ್ಡ ರಂಗೇಗೌಡರು ಮತ್ತು ಮಾಜಿ ಸಚಿವ ಎಚ್ಎಮ್ ರೇವಣ್ಣ ಭಾಗವಹಿಸಲಿದ್ದಾರೆ.




