ದೆಹಲಿ: ಕರ್ನಾಟಕದ ಆಳಂದದಲ್ಲಿ 6,000 ಮತದಾರರ ಹೆಸರು ಡಿಲೀಟ್ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಚುನಾವಣಾ ಆಯೋಗದ ಮೇಲೆ ‘ಮತಗಳವು’ ಆರೋಪವನ್ನು ಮುಂದುವರೆಸಿದರು.
ಕರ್ನಾಟಕದ ಆಳಂದ ವಿಧಾನಸಭಾಕ್ಷೇತ್ರವನ್ನು ಪ್ರಮುಖ ಉದಾಹರಣೆಗಳೊಂದಿಗೆ ಹಲವು ಸಾಕ್ಷಿಗಳನ್ನು ಬಿಡುಗಡೆ ಮಾಡಿದರು. ಆಳಂದ ಕರ್ನಾಟಕದ ಒಂದು ಕ್ಷೇತ್ರ. ಯಾರೋ 6,018 ಮತಗಳನ್ನು ಅಳಿಸಲು ಪ್ರಯತ್ನಿಸಿದರು ಎಂದರು.
2023ರ ಚುನಾವಣೆಯಲ್ಲಿ ಆಳಂದದಲ್ಲಿ ಅಳಿಸಲಾದ ಒಟ್ಟು ಮತಗಳ ಸಂಖ್ಯೆ ನಮಗೆ ತಿಳಿದಿಲ್ಲ. ಅವು 6,018ಕ್ಕಿಂತ ಹೆಚ್ಚು. ಆದರೆ ಯಾರೋ 6,018 ಮತಗಳನ್ನು ಅಳಿಸುವಾಗ ಸಿಕ್ಕಿಬಿದ್ದರು ಎಂದರು.




