ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ವಾರ್ಡ್ಗಳ ರಸ್ತೆ ಹಾಗೂ ವೃತ್ತಗಳಿಗೆ ಮರುನಾಮಕರಣ ಮಾಡಲಾಗುತ್ತಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳೇನಾದರು ಇದ್ದಲ್ಲಿ ಸಲ್ಲಿಸಬಹುದು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಪಾಲಿಕೆ ವ್ಯಾಪ್ತಿಯ 05 ನೇ ವಾರ್ಡ್ನ ಕಾರ್ಕಲತೋಟ ಮುಖ್ಯ ರಸ್ತೆಯಲ್ಲಿನ (ಸರ್ಕಾರಿ ಶಾಲೆ ಹಿಂಭಾಗ) ವೃತ್ತವನ್ನು “ನಂದಮೂರಿ ತಾರಕ ರಾಮರಾವ್” ವೃತ್ತ ಮತ್ತು ಕಾರ್ಕಲತೋಟ ಮುಖ್ಯ ರಸ್ತೆಯನ್ನು “ನಂದಮೂರಿ ತಾರಕ ರಾಮರಾವ್” ರಸ್ತೆ ಎಂದು ನಾಮಕರಣ, ವಾರ್ಡ್ ನಂ.08 ರ ಆಕ್ಟ್ರಾಯ್ ವೃತ್ತವನ್ನು ಗೋಮಾತಾ ವೃತ್ತ ಎಂದು, ಕೌಲ್ಬಜಾರ್ ರಸ್ತೆಯ ಒಂದನೇ ರೈಲ್ವೇ ಗೇಟ್ ಹತ್ತಿರದ (ಫ್ಲೈಓವರ್) ಇರುವ ವೃತ್ತವನ್ನು ಶ್ರೀ ಮೌಲಾನ ಅಬ್ದುಲ್ ಕಲಾಂ ಅಜಾದ್ ವೃತ್ತ ಎಂದು ನಾಮಕರಣ ಮಾಡುವುದಾಗಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆಗಳಿದ್ದಲ್ಲಿ 30 ದಿನದೊಳಗಾಗಿ ಲಿಖಿತ ರೂಪದಲ್ಲಿ ಪಾಲಿಕೆ ಕಚೇರಿಗೆ ಸಲ್ಲಿಸಬಹುದು.
ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದಲ್ಲಿ ಸರ್ಕಾರದ ಸುತ್ತೋಲೆ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.




