ದೇಗುಲ ನೆಲಸಮ ಸಮಯದಲ್ಲಿ ಬಿಜೆಪಿಗೆ ಹಿಂದುತ್ವದ ನೆನಪಾಗಲಿಲ್ಲವೇ?: ಸಿದ್ದು

5 years ago

ಬೆಂಗಳೂರು: ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.

ನಂಜನಗೂಡಿನ ದೇವಸ್ಥಾನವನ್ನು ಸರ್ಕಾರ ಕೆಡವಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಅವರು, ನ್ಯಾಯಾಲಯದ ಆದೇಶವಿದ್ದರೂ ಅದ‌ನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವ ಮುನ್ನ ಜಿಲ್ಲಾಡಳಿತ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಾಗಿತ್ತು ಎಂದಿದ್ದಾರೆ.

ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆನಪಾಗಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ದೇವಸ್ಥಾನ ಕೆಡವಿ ಹಾಕಿದ ಘಟನೆ ಬಗ್ಗೆ ಮುಖ್ಯಮಂತ್ರಿಗಳು ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಹೊಸ ನಿವೇಶನ ಮಂಜೂರು ಮಾಡಿ ಸರ್ವರನ್ನೂ ವಿಶ್ವಾಸಕ್ಕೆ ಪಡೆದು ನೂತನ ದೇವಸ್ಥಾನವನ್ನು ರಾಜ್ಯ ಸರ್ಕಾರವೇ ನಿರ್ಮಿಸಿಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Leave a Reply