ಬೆಂಗಳೂರು: ಆಹಾರ ಭದ್ರತೆ, ಇಂಧನ ಸುರಕ್ಷತೆ, ಶುದ್ಧ ಜಲ, ಮೂಲಸೌಕರ್ಯ, ಆರೋಗ್ಯ ಸೇವೆ, ಮೆಡಿಸಿನ್, ತ್ಯಾಜ್ಯವಸ್ತುಗಳ ನಿರ್ವಹಣೆ, ಪರಿಸರ ನಿರ್ವಹಣೆಯಂತಹ ಕ್ಷೇತ್ರಗಳಲ್ಲಿ ಎದುರಾಗುವ ಸವಾಲುಗಳಿಗೆ ವಿನೂತನ ನ್ಯಾನೋ ಟೆಕ್ನಾಲಜಿ ಆಧಾರಿತ ಪರಿಹಾರಗಳನ್ನು ಕಂಡುಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಇಂಡಿಯಾ ನ್ಯಾನೋ ಸಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಹೆಚ್ಚುತ್ತಿರುವ ನಗರೀಕರಣ, ಜನಸಂಖ್ಯೆ ಹೆಚ್ಚಳ ಹಾಗೂ ಬದಲಾಗುತ್ತಿರುವ ಜೀವನ ಶೈಲಿಯಿಂದ ಮುಂದಿನ ದಿನಗಳಲ್ಲಿ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಗಳಿವೆ. ಇವುಗಳಿಗೆ ನ್ಯಾನೋ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಸಂಶೋಧಿಸಲು ವಿಜ್ಞಾನಿಗಳಿಗೆ ಮತ್ತು ಇಂಜಿನಿಯರ್ಗಳು ಮುಂದಾಗಬೇಕು ಎಂದರು.
ಹೊಸ ತಾಂತ್ರಿಕ ಕ್ಷೇತ್ರದ ಸಾಧ್ಯತೆಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಅಂತಾರಾಷ್ಟ್ರೀಯ ಸಂಶೋಧನಾ ಸಹಭಾಗಿತ್ವ ಅತ್ಯಗತ್ಯವಾಗಿದೆ. ಇದಕ್ಕಾಗಿ ಮಾಹಿತಿಗಳ ಹಾಗೂ ತಾಂತ್ರಿಕತೆಗಳ ಪರಸ್ಪರ ವಿನಿಮಯದ ಅಗತ್ಯವಿದೆ.ಈ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳ ಮತ್ತು ಅವುಗಳ ಪರಿಹಾರ ಸಾಧ್ಯತೆಗಳ ವಿಚಾರ ವಿನಿಮಯ ಮತ್ತು ಅಂತಿಮವಾಗಿ ಸಮಾಜದ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಪ್ರತಿಭೆಗಳನ್ನು ಬೆಳೆಸಬೇಕಿದೆ ಎಂದರು.
ಯುವ ಉದ್ಯಮಿಗಳು ಈ ಕ್ಷೇತ್ರದ ತಜ್ಞರ ಮತ್ತು ದಿಗ್ಗಜರ ಸಹಕಾರ ಮತ್ತು ಸಹಭಾಗಿತ್ವದ ಸದುಪಯೋಗ ಪಡೆದುಕೊಂಡು ರಾಜ್ಯದಲ್ಲಿ ಹೊಸ ಉದ್ಯಮಗಳನ್ನು ಆರಂಭಿಸಲು ಮುಕ್ತ ಆಹ್ವಾನ ನೀಡುವುದಾಗಿ ಹೇಳಿದರು.
ಕರ್ನಾಟಕದಲ್ಲಿ ಈ ವಿನೂತನ ಉದ್ಯಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲು ಸಾಧ್ಯವಿರುವ ಸಂಪೂರ್ಣ ಸಹಕಾರವನ್ನು ನಮ್ಮ ಸರ್ಕಾರ ಒದಗಿಸಲಿದೆ ಎಂದು ಭರವಸೆ ನೀಡಿದರು.
ಕರ್ನಾಟಕ ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆಗಳಿಗೆ ಮಾತ್ರವಲ್ಲದೆ ಶೈಕ್ಷಣಿಕ ಮತ್ತು ಸಂಶೋಧನೆ ಚಟುವಟಿಕೆಗಳಿಗೆ ಭದ್ರ ತಳಹದಿಯನ್ನು ಕಲ್ಪಿಸುವ ಕಾರ್ಯದಲ್ಲಿ ಹೆಸರುವಾಸಿಯಾಗಿದೆ. ತಾಂತ್ರಿಕತೆ ಆಧಾರಿತ ಅನ್ವೇಷಣೆ ಕ್ಷೇತ್ರದಲ್ಲಿ ನಮ ರಾಜ್ಯ ಮುಂಚೂಣಿಯಲ್ಲಿದೆ ಎಂದರು.
ಐಐಎಸ್ಸಿ, ಜೆಎನ್ಸಿಎಎಸ್ಆರ್, ಎನ್ಸಿಬಿಎಸ್, ಸಿಇಎನ್ಎಸ್ ನಂತಹ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ನೆರವಿನೊಂದಿಗೆ ಬೆಂಗಳೂರು ರಾಷ್ಟ್ರದ ನ್ಯಾನೋ ಟೆಕ್ ಹಬ್ ಆಗಿ ರೂಪುಗೊಳ್ಳುವ ಪೂರ್ಣ ವಿಶ್ವಾಸ ತಮಗಿದೆ. ಮುಂಬರುವ ವರ್ಷಗಳಲ್ಲಿ ಬೆಂಗಳೂರು ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ನಿಭಾಯಿಸಲಿದೆ ಎಂದರು.



