ಬೆಂಗಳೂರು: ಡ್ರಗ್ಸ್ ವಿರುದ್ಧ ಸಮರ ಸಾರಿರುವ ನಗರ ಪೊಲೀಸರು ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ನಡೆಸಿ ಇಬ್ಬರು 2 ವಿದೇಶಿ ಪ್ರಜೆಗಳು ಸೇರಿ 6 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿ 23.84 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಸಿಸಿಬಿ, ದಕ್ಷಿಣ ವಿಭಾಗ, ಉತ್ತರ-ಪೂರ್ವ ವಿಭಾಗ ಹಾಗೂ ಶ್ವಾನ ದಳ ಮತ್ತು ಎಸ್ಒಳಸಿಒ ತಂಡಗಳ ಸಂಯುಕ್ತ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಿಸಿಬಿ ಮಾದಕ ದ್ರವ್ಯ ನಿಗ್ರಹ ವಿಭಾಗದದಿಂದ ಕೈಗೊಂಡ ಕಾರ್ಯಾಚರಣೆಯಲ್ಲಿ 7.176 ಕೆ.ಜಿ ಹೈಡ್ರೋ ಗಾಂಜಾ 1.399 ಕೆ.ಜಿ ಎಂಡಿಎಎಂಎ ಕ್ರಿಸ್ಟಲ್, 2.30 ಕೆ.ಜಿ ಅಫೀಮ್ ಸೇರಿ 11.81 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದರು.
ದೊಡ್ಡಬಳ್ಳಾಪುರದ ನಾಗದೇನಹಳ್ಳಿಯ ಸುರೇಶ್,,ಮನೋಜ್,ಅತ್ತಿಬೆಲೆಯ ಅಖಿಲ್ ಸಂತೋಷ್, ಕನಕಪುರದ ಸೋಮಶೇಖರ್, ಕಲ್ಯಾಣನಗರದ ದಿಲೀಪ್ ಕುಮಾರ್ ಸಾಹು ಹಾಗೂ ಸೂಡಾನ್ ನ ಲಾಡೂರಾಮ್ ಬಂಧಿತ ಆರೋಪಿಗಳಾಗಿದ್ದಾರೆ ಎಂದರು.
ಉತ್ತರ-ಪೂರ್ವ ವಿಭಾಗದ ಕೊತ್ತನೂರು ಪೊಲೀಸರು ಖಚಿತವಾದ ಮಾಹಿತಿಯನ್ನು ಆಧರಿಸಿ ಕೈಗೊಂಡಿರುವ ಕಾರ್ಯಾಚರಣೆಯಲ್ಲಿ 12.03 ಕೋಟಿ ಮೌಲ್ಯದ 4.815 ಕೆ.ಜಿ ಎಂಡಿಎಎಂಎ ಕ್ರಿಸ್ಟಲ್ ವಶಪಡಿಸಿಕೊಳ್ಳಲಾಗಿದೆ ಎಂದರು.
ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳಿಗೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ಕುರಿತು ಖಚಿತ ಮಾಹಿತಿಯ ಆಧಾರದ ಮೇರೆಗೆ ದಾಳಿ ನಡೆಸಿ, ರಾಜಸ್ಥಾನ ಮೂಲದ ಓರ್ವ ಡ್ರಗ್ ಪೆಡ್ಲರ್ನಗನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯು 2024 ರಿಂದ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದು,ಅದರಿಂದ ಬರುವ ಆದಾಯದಿಂದ ಖರ್ಚು ನಿರ್ವಹಿಸಲು ಸಾಧ್ಯವಾಗದೇ ಸಂಬಂಧಿಕನ ಸಹಾಯದಿಂದ ಕಳೆದ 3 ತಿಂಗಳಿಂದ ಡ್ರಗ್ಸ್ ಮಾರಾಟ ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದಾನೆ.
ಆರೋಪಿಯ ವಶದಿಂದ 4 ಕೋಟಿ ಮೌಲ್ಯದ 1 ಕೆ.ಜಿ 399 ಗ್ರಾಂ ಎಂಡಿಎಎಂಎ ಕ್ರಿಸ್ಟಲ್, 2 ಕೆ.ಜಿ 30 ಗ್ರಾಂ ಅಫೀಮ್ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ, ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕೊತ್ತನೂರು ಪೊಲೀಸರು ಎನ್.ಜಿ.ಗೊಲ್ಲಹಳ್ಳಿ ಗ್ರಾಮದ ಬಳಿಯ ಅಪಾರ್ಟ್ಮೆಂಪಟ್ನ ಲ್ಲಿ,ವಿದೇಶಿ ಮೂಲದ ಮಹಿಳೆಯರಿಬ್ಬರು ಡ್ರಗ್ ಪೆಂಡ್ಲಿಂಗ್ನದಲ್ಲಿ ತೊಡಗಿದ್ದ ಮಾಹಿತಿ ಆಧರಿಸಿ ದಾಳಿ ಮಾಡಿ ಬಂಧಿಸಿದ್ದಾರೆ.
ಬಂಧಿತರಿಂದ 12.03 ಕೋಟಿ ಮೌಲ್ಯದ 4 ಕೆ.ಜಿ 815 ಗ್ರಾಂ ಎಂಡಿಎಎಂಎ ಕ್ರಿಸ್ಟಲ್ನ್ನು ವಶಪಡಿಸಿಕೊಂಡು ಎನ್ಡಿ.ಪಿಎಸ್ ಮತ್ತು ವಿದೇಶಿ ನಾಗರಿಕರ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯು ವಿದೇಶಗಳಿಂದ ಮಾದಕ ವಸ್ತುಗಳನ್ನು ಒಳಗೊಂಡ ಶಂಕಾಸ್ಪದ ಪಾರ್ಸೆಲ್ಗ ಳು ಕೆ.ಜಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿದೇಶಿ ಅಂಚೆ ಕಚೇರಿಗೆ ಬರುವ ಖಚಿತವಾದ ಮಾಹಿತಿಯನ್ನು ಆಧರಿಸಿ ದಾಳಿ ಕೈಗೊಂಡಿದ್ದಾರೆ.
ಸ್ನಿಫರ್ ಶ್ವಾನಗಳ ಸಹಾಯದಿಂದ ಸರಕುಗಳಿಂದ ಬಂದ ಶಂಕಾಸ್ಪದ ಪಾರ್ಸೆಲ್ಗ್ಳನ್ನು ಗುರುತಿಸಿ, ನಡೆಸಿದ ಕಾರ್ಯಾಚರಣೆಯಲ್ಲಿ 3.81 ಕೋಟಿ ಮೌಲ್ಯದ 3 ಕೆ.ಜಿ ಹೈಡ್ರೋ ಗಾಂಜಾ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.




