ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಇದರಿಂದ ತೆರಿಗೆದಾರರ ಹಣ ಉಳಿತಾಯವಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ಒಮ್ಮೊಮ್ಮೆ ನಡೆದಾಗ ನೀತಿ ಸಂಹಿತೆ ಜಾರಿಯಾಗುತ್ತದೆ. ಇದರಿಂದಾಗಿ ಕಾಮಗಾರಿಗಳು ವಿಳಂಬವಾಗಿ ಸರ್ಕಾರ ಯಾವುದೇ ಯೋಜನೆಯನ್ನು ಸರಿಯಾಗಿ ಜಾರಿ ಮಾಡಲು ಸಾಧ್ಯವಾಗುವುದಿಲ್ಲ. ಹೊಸ ಕ್ರಮದಿಂದ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು.
ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳು ಇಂತಹ ಕ್ರಮಕ್ಕೆ ವಿರೋಧ ಮಾಡುವುದು ಸಹಜ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದರೆ, ಸಮಸ್ಯೆಯಾಗುತ್ತದೆ ಎಂದು ಅವರು ಹೆದರಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಮೋದಿಯವರ ಭಯವಿದೆ. ಈ ಕ್ರಮದಿಂದಾಗಿ ಪ್ರಧಾನಿ ಮತ್ತು ಮುಖ್ಯಮಂತ್ರಿಗೆ ಐದು ವರ್ಷಗಳ ಸಂಪೂರ್ಣ ಅವಧಿ ದೊರೆಯುತ್ತದೆ. ಆ ದೃಷ್ಟಿಯಿಂದ ಇದು ಉತ್ತಮ ಕ್ರಮ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಹತ್ತಿರ ಹೋಗುವ ಸರಿಸಮನಾದ ನಾಯಕರು ಯಾರೂ ಕಾಂಗ್ರೆಸ್ನಲ್ಲಿಲ್ಲ. ರಾಹುಲ್ ಗಾಂಧಿಯವರಿಗೆ ಮಾತನಾಡಲು ಬರಲ್ಲ, ತೀರ್ಮಾನ ಕೈಗೊಳ್ಳಲು ಬರಲ್ಲ. ಅವರು ಮಕ್ಕಳಂತೆ ಆಟವಾಡುತ್ತಿದ್ದು, ಅವರಿಗೆ ಪ್ರಬುದ್ಧತೆ ಇಲ್ಲ ಎಂಬುದು ಅವರ ವರ್ತನೆಯಿಂದ ಗೊತ್ತಾಗುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅತಂತ್ರವಾಗಿದ್ದು, ಆ ವಿಷಯ ಮರೆಮಾಚಲು ಮೋದಿ ಸರ್ಕಾರದ ಬಗ್ಗೆ ಟೀಕೆ ಮಾಡಲಾಗುತ್ತಿದೆ. ನರೇಂದ್ರ ಮೋದಿಯವರು ಖಂಡಿತ 5 ವರ್ಷ ಆಡಳಿತ ನಡೆಸಲಿದ್ದಾರೆ. ಆ ನಂತರ ಕೂಡ ಅವರೇ ಪ್ರಧಾನಿಯಾಗಲಿದ್ದಾರೆ ಎಂದರು.
ಕಾಂಗ್ರೆಸ್ಗೆ ಪ್ರಧಾನಿ ಯಾರೆಂದು ಘೋಷಿಸುವ ತಾಕತ್ತು ಕೂಡ ಇಲ್ಲ. ಇಂತಹ ಸ್ಥಿತಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಬಾರದು. ರಾಹುಲ್ ಗಾಂಧಿಯವರು ವಿದೇಶಕ್ಕೆ ಹೋಗಿ ಸಂವಿಧಾನ ಹಾಗೂ ಮೀಸಲು ಬಗ್ಗೆ ಮಾತನಾಡಿದ್ದಾರೆ. ಈ ವಿಚಾರಗಳನ್ನು ದೇಶದೊಳಗೆ ಮಾತಾಡಬೇಕು. ಅಲ್ಲಿ ಹೋಗಿ ದೇಶವನ್ನು ಹೀಯಾಳಿಸುವ ಮಾತಾಡಬಾರದು ಎಂದರು.
ನನ್ನ ಹಿಂದೆ ಇರುವವರೇ ಮುಗಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆರೇಳು ಜನರು ಅವರ ಕುರ್ಚಿಗೆ ಹಳ್ಳ ತೋಡಲು ಸಿದ್ಧವಾಗಿದ್ದಾರೆ ಎಂದರು.




