ದೇಶದ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಪ್ರಸ್ತುತತೆಯನ್ನು ಚರ್ಚಿಸಲು ಬೆಂಗಳೂರಿನಲ್ಲಿ ನಡೆಯುತ್ತಿರುವ ಎಐಸಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಸಭೆ ಚಾರಿತ್ರಕವೂ ಹೌದು, ಭವಿಷ್ಯತ್ತಿನ ವಿದ್ಯಮಾನಗಳಿಗೆ ದಿಕ್ಸೂಚಿಯೂ ಆಗಲಿದೆ ಎನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕಾಂಗ್ರೆಸ್ ಪಕ್ಷ ಕಾಲ ಕಾಲಕ್ಕೆ ತನ್ನ ಕಾರ್ಯಸೂಚಿಯನ್ನು ಪ್ರಜಾಸತ್ತಾತ್ಮಕವಾಗಿ ಚರ್ಚಿಸುತ್ತಾ, ಸಂವಾದ, ಸಲಹೆ ಸೂಚನೆಗಳಿಗೆ ತೆರೆದುಕೊಳ್ಳುತ್ತಾ ಪಕ್ಷದ ನೀತಿ-ನಿಯಮಗಳನ್ನು ಬದಲಾಯಿಸಿಕೊಂಡಿದೆ. ಅಂತಹ ಬದಲಾವಣೆಯ ಮುಂದುವರೆದ ಭಾಗವಾಗಿ ಇಂದು ನಡೆಯುತ್ತಿರುವ ರಾಷ್ಟ್ರೀಯ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಭೆ ಐತಿಹಾಸಿಕ ವೇದಿಕೆಯಾಗಲಿದೆ.
ಹಿಂದುಳಿದ ಸಮುದಾಯಗಳ ತಾತ್ವಿಕ ರಾಜಕೀಯದ ಪರಿಭಾಷೆಯನ್ನು ಆಳವಾಗಿ ಅಧ್ಯಯನ ನಡೆಸಿರುವ ನಮ್ಮ ಪಕ್ಷದ ನಾಯಕರೂ, ಲೋಕಸಭೆಯ ವಿಪಕ್ಷ ನಾಯಕರಾದ ಶ್ರೀ Rahul Gandhi ಯವರು ಅತ್ಯಂತ ಸ್ಪಷ್ಟವಾಗಿ ಹಾಗೂ ಬದ್ದತೆಯೊಂದಿಗೆ ಹಿಂದುಳಿದ ವರ್ಗಗಳ ಪ್ರಭಲ ಧ್ವನಿಯಾಗಿರುವುದು ಈ ಕಾಲದ ಆಶಯವೇ ಸರಿ.
ಭಾರತ್ ಜೋಡೋ ಯಾತ್ರೆಯ ಮೂಲಕ ದೇಶದ ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಸಮಸ್ಯೆ- ಸವಾಲುಗಳ ಬಗ್ಗೆ ಅಧ್ಯಯನ ನಡೆಸಿರುವ ಶ್ರೀ ರಾಹುಲ್ ಗಾಂಧಿಯವರು ಅತ್ಯಂತ ಸ್ಪಷ್ಟವಾದ ನಿಲುವನ್ನು ಕಂಡುಕೊಂಡಿದ್ದಾರೆ. ಜಾತಿ ಜನಗಣತಿ, ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷಾ ವರದಿಗಳ ಒತ್ತಾಯ, ಪಕ್ಷದ ಆಂತರಿಕ ಸಮಿತಿಗಳಲ್ಲಿ ಹಿಂದುಳಿದವರಿಗೆ ಆದ್ಯತೆಗಳು ಸೇರಿದಂತೆ ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ದಿಯತ್ತ ಚಿಂತನೆಗಳು ಪ್ರಭಲವಾಗಿ ನಡೆಯುತ್ತಿದೆ.
ನಾಲ್ವಡಿ ಒಡೆಯರು, ಶಾಹು ಮಹಾರಾಜರು, ಫುಲೆ, ಬಾಬಾ ಸಾಹೇಬರು ಸೇರಿದಂತೆ ಅನೇಕ ಮಹನೀಯರು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಅಂತಹ ಮಹನೀಯರ ಪ್ರೇರಣೆಯೊಂದಿಗೆ ಶ್ರೀ ರಾಹುಲ್ ಗಾಂಧಿ ಅವರು ರಾಷ್ಟ್ರಮಟ್ಟದಲ್ಲಿ ಹಿಂದುಳಿದವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ತಾತ್ವಿಕ ಹೋರಾಟಕ್ಕೆ ನಾಯಕತ್ವ ನೀಡಿರುವುದು ಕ್ರಾಂತಿಕಾರಿ ಹೆಜ್ಜೆಯಾಗಲಿದೆ.
ರಾಜ್ಯದ ಮುಖ್ಯಮಂತ್ರಿಗಳು, ಹಿಂದುಳಿದ ಸಮುದಾಯಗಳ ನಾಯಕರೂಗಳು ಆಗಿರುವ ಶ್ರೀ Siddaramaiah ನವರ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯಲಿರುವ ಎಐಸಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಸಭೆ ಸ್ವಾತಂತ್ರ್ಯ ನಂತರದ ಕಳೆದ 75 ವರ್ಷಗಳ ಹಿಂದುಳಿದವರ ಸಮಸ್ಯೆ ಸವಾಲುಗಳು ಚರ್ಚೆಗೆ ಮಾತ್ರ ಸೀಮಿತವಾಗದೆ ಭವಿಷ್ಯತ್ತಿನ ಹಿಂದುಳಿದ ವರ್ಗಗಳ ತಾತ್ವಿಕ ಹೋರಾಟಕ್ಕೆ ನಾಂದಿ ಹಾಡಲಿದೆ ಎಂದು ಆಶಿಸೋಣ.
– ಬಿ ಕೆ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ




