ರಾಷ್ಟ್ರೀಯ ವಿಜ್ಞಾನ ದಿನಾಚರಣೆ

2 years ago

ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಬೆಂಗಳೂರು ನಗರದ ಜವಾಹರ ಲಾಲ್‌ ನೆಹರು ತಾರಾಲಯದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 1500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ವಿದ್ಯಾರ್ಥಿಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ವೈಜ್ಞಾನಿಕ ಮನೋಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಿದ್ದಾರೆ.

ಇದೇ ವೇಳೆ, ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲೂ ವಿದ್ಯಾರ್ಥಿಗಳಿಗೆ ಏಕಕಾಲಕ್ಕೆ ಈ ಪ್ರತಿಜ್ಞಾ ವಿಧಿಯನ್ನು ಭೋಧಿಸುವಂತೆ ಶಾಲಾ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಮೃದ್ದ ಶಾಂತಿಯುತ, ಪ್ರಗತಿಪರ ಸಮಾಜ ಮತ್ತು ದೇಶ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದೆ. ಸಮಾಜದಲ್ಲಿ ಶಾಂತಿ ಮತ್ತು ಬ್ರಾತೃತ್ವವನ್ನು ಬೆಸೆಯುವ ಹಿನ್ನಲೆಯಲ್ಲಿ ವೈಜ್ಞಾನಿಕ ಮನೋಭಾವದ ನೆಲೆಗಟ್ಟನ್ನು ಸಾರ್ವಜನಿಕರಲ್ಲಿ ಬೆಳೆಸುವುದು ಅತ್ಯಾವಶ್ಯಕವಾಗಿದ್ದು ಭಾರತದ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply