ದಾವಣಗೆರೆ: ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 13ರಂದು ರಾಷ್ಟೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ರಾಷ್ಟೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳು ತಮ್ಮ ವ್ಯಾಪ್ತಿಯಲ್ಲಿ ಲೋಕ್ ಅದಾಲತ್‌ನ್ನು ಆಯೋಜಿಸಲಿವೆ. ಸಾರ್ವಜನಿಕರು ರಾಷ್ಟೀಯ ಲೋಕ್ ಅದಾಲತ್‌ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು.
ಈ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹುದು. ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು(ವಿಚ್ಛೇಧನ ಹೋರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದೂ.ಸಂ: 08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ ದೂ.ಸಂ: 08192-296885, ಹೊನ್ನಾಳಿ ದೂ.ಸಂ:08188-251732, ಚನ್ನಗಿರಿ ದೂ.ಸ 08189-229195 ಮತ್ತು ಜಗಳೂರು ದೂ.ಸ:08196-227600 ಸಂಪರ್ಕಿಸಬಹುದು.




