ಜೆಡಿಎಸ್ ರಾಜ್ಯ ಮಹಿಳಾ ಕಾರ್ಯಾಧ್ಯಕ್ಷ್ಯೆಯಾಗಿ ನಜ್ಮಾ ನಜೀರ್ ಚಿಕ್ಕನೇರಳೆ ನೇಮಕ

3 years ago

ಬೆಂಗಳೂರು: ಜೆಡಿಎಸ್ ರಾಜ್ಯ ಮಹಿಳಾ ಕಾರ್ಯಾಧ್ಯಕ್ಷ್ಯೆಯಾಗಿ ನಜ್ಮಾ ನಜೀರ್ ಚಿಕ್ಕನೇರಳೆ ನೇಮಕ ಮಾಡಿ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ.

ನಿಮ್ಮನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷ ಮಹಿಳಾ ವಿಭಾಗದ “ರಾಜ್ಯ ಕಾರ್ಯಧ್ಯಕ್ಷರು” ಯನ್ನಾಗಿ ತಮ್ಮನ್ನು ಈ ಕೂಡಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದಿದ್ದಾರೆ.

ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತತ್ತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಮಹಿಳೆಯರನ್ನು ಸಂಘಟಿಸಲು ಈ ಕೂಡಲೇ ರಾಜ್ಯ ಪ್ರವಾಸವನ್ನು ಕೈಗೊಂಡು, ಜನತಾದಳ (ಜಾತ್ಯತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಮತ್ತು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ಆಶಿಸುತ್ತೇನೆ ಎಂದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ನಜ್ಮಾ ನಜೀರ್ ಚಿಕ್ಕನೇರಳೆ, ಅತ್ಯಂತ ಖುಷಿಯ ಸಂಗತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಜಾತ್ಯತೀತ ಜನತಾದಳ ಪಕ್ಷ ನನ್ನನ್ನು ಮಹಿಳಾ ಘಟಕದ ‘ರಾಜ್ಯ ಕಾರ್ಯಾಧ್ಯಕ್ಷೆ’ಯಾಗಿ ನೇಮಕ ಮಾಡಿದೆ ಎಂದಿದ್ದಾರೆ.

ನನ್ನ ಮೇಲೆ ನಂಬಿಕೆ ಇಟ್ಟು ಬಹುದೊಡ್ಡ ಜವಾಬ್ದಾರಿಯನ್ನು ನೀಡಿದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ ದೇವೇಗೌಡ ಅವರಿಗೂ, ರಾಜ್ಯಾಧ್ಯಕ್ಷರಾದ ಸಿ.ಎಂ ಇಬ್ರಾಹಿಂ ಸಾಹೇಬರಿಗೂ,
ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿರವರಿಗೂ, ಮಹಿಳಾ ರಾಜ್ಯಾಧ್ಯಕ್ಷರಾದ  ಲೀಲಾದೇವಿ ಪ್ರಸಾದ್ ಅಮ್ಮನವರಿಗೂ ಹಾಗು ಪಕ್ಷದ ಎಲ್ಲಾ ವರಿಷ್ಠರಿಗೂ ಕೃತಜ್ಞತೆ ಸಲ್ಲಿಸುತ್ತೇನೆ.
ಹೊಸ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆ,ಪ್ರಾಮಾಣಿಕತೆಯೊಂದಿಗೆ ನಿಭಾಯಿಸುತ್ತೇನೆ ಎಂದಿದ್ದಾರೆ.

ಎಂದಿನಂತೆ ನಿಮ್ಮೆಲ್ಲರ ಸಹಕಾರ ನನ್ನೊಂದಿಗಿರಲಿ ಎಂದು ಮನವಿ ಮಾಡಿದ್ದಾರೆ.

Leave a Reply