ಎನ್.ಡಿ.ಎ ಗೆ ಪೂರ್ಣ ಬಹುಮತ ದೊರಕುವುದಿಲ್ಲ: ಸಿದ್ದರಾಮಯ್ಯ

2 years ago

ಮೈಸೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು  ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದರು.

ಎನ್.ಡಿ.ಎ ಗೆ ಪೂರ್ಣ ಬಹುಮತ ದೊರಕುವುದಿಲ್ಲ, Bharatiya Janata Party (BJP) ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ. 400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರವಾಗಿದೆ ಎಂದರು.

ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ ಯಾಕೆ ಮಿತಿಮೀರಿದೆ? ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾಕೆ ಅನ್ಯಾಯವಾಗುತ್ತಿದೆ? ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ? ಎಂಬುದಕ್ಕೆಲ್ಲಾ ಉತ್ತರ ಹೇಳಲಿ ಎಂದರು.

ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂಬುದು Narendra Modi ಅವರ ಮನಸಿನ ಮಾತಾಗಿದ್ದರೆ ಸಂವಿಧಾನ ಬದಲಿಸುತ್ತೇವೆ ಎಂದ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ? ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ? ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೆಯ 3-4 ತಿಂಗಳು ಬಂದು ಭಾಷಣ ಮಾಡಿದರು. ಟಿಕೆಟ್ ಕೊಟ್ಟರೆ ಸೋಲುತ್ತಾರೆ ಎಂಬ ವರದಿ ಬಂದಿದ್ದಕ್ಕೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದರು.

ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿಯಾದಾಗ ಸಾವರ್ಕರ್ ಹಾಗೂ ಗೋಲ್ವಾಲ್ಕರ್ ಅವರು ಸಂವಿಧಾನವನ್ನು ವಿರೋಧಿಸಿದ್ದರು ಎಂದು ಹೇಳಿದರು.

Leave a Reply