ಪೌರಕಾರ್ಮಿಕರ ಖಾಯಂಗೊಳಿಸಲು ಅಗತ್ಯ ಕ್ರಮ

2 years ago

ಬೆಂಗಳೂರು: ನೇರಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ 24,005 ಪೌರಕಾರ್ಮಿಕರನ್ನು ಈಗಾಗಲೇ ಖಾಯಂಗೊಳಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ. ನೇರಪಾವತಿಯಡಿಯಲ್ಲಿ ಬಾಕಿ ಉಳಿದಿರುವ ಪೌರಕಾರ್ಮಿಕರಿಗೂ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ವಸೂಲು ಮಾಡಲು, ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸೇವೆಯನ್ನು ಪಡೆಯಲಾಗುವುದು ಎಂದರು.

ಸಮರ್ಪಕ ಹಾಗೂ ಯೋಜಿತ ನಗರೀಕರಣಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಎಲ್ಲಾ ಸ್ಥಳೀಯ ಯೋಜನಾ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತೀಕರಿಸಲು ಕ್ರಮಕೈಗೊಳ್ಳಲಾಗುವುದು. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಸಭೆಗಳ ಕಾರ್ಯಕಲಾಪಗಳನ್ನು ನೇರ ಪ್ರಸಾರ ಮಾಡಲಾಗುವುದು. ಮೈಸೂರಿನ ಪ್ರಖ್ಯಾತ ಲ್ಯಾನ್ಸ್ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು ಎಂದರು.

Leave a Reply