ವಿಕಲಚೇತನರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಲಾಗುವುದು

3 years ago

#Necessary #facilities #provided #disabled #Bellary

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ

ಬಳ್ಳಾರಿ: ವಿಕಲಚೇತನರ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರ ಸದುಪಯೋಗ ಪಡಿಸಿಕೊಳ್ಳಬೇಕು ಮತ್ತು ಜಿಲ್ಲಾಡಳಿತದಿಂದಲೂ ವಿಕಲಚೇತನರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪುನರ್ವಸತಿ ಕೇಂದ್ರ ಹಾಗೂ ತಮನ್ನಾ ವಿಶೇಷ ಮಕ್ಕಳ ಶಾಲೆ, ಜೆ.ಎಸ್.ಡಬ್ಲ್ಯೂ ತೋರಣಗಲ್ಲು, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಂಘ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಜಿಲ್ಲಾ ವಕ್ಫ್ ಸಮಿತಿಯ ಶಾದಿ ಮಹಲ್ ಸಭಾಂಗಣದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಕಲಚೇತನರು ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಫರ್ಧೆಗಳಲ್ಲಿ ಭಾಗವಹಿಸಿ ಸ್ಪೂರ್ತಿಯಾಗಿದ್ದಾರೆ. ಯಾವುದೇ ಕೀಳಿರಿಮೆಯಿಲ್ಲದೇ ಎಲ್ಲಾ ರಂಗಗಳಲ್ಲಿ ಮುಕ್ತವಾಗಿ ಪಾಲ್ಗೊಳ್ಳಬೇಕು ಎಂದು ಕರೆನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ವಿಕಲಚೇತನರು ಸಮಾಜದಲ್ಲಿ ಗೌರವಯುತವಾಗಿ ಮತ್ತು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಕರೆನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪಮೇಯರ್, ಜಿಲ್ಲಾಧಿಕಾರಿಗಳ ಕಚೇರಿಯ ವಿಶೇಷಾಧಿಕಾರಿ ಗೌಸಿಯಾ ಬೇಗಂ, ವೃತ್ತ ಪೋಲಿಸ್ ನಿರೀಕ್ಷಕಿ ಸಿಂಧೂರ, ಶಾಲಾ ಶಿಕ್ಷಣ ಇಲಾಖೆಯ ಮಹಿಮದ್ದೀನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಕೆ.ಹೆಚ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸುಮಾರು 700 ಜನ ವಿಶೇಷ ವಿಕಲಚೇತನರು ವಿಶೇಷ ಚೇತನರು ಮತ್ತಿತರರು ಹಾಜರಿದ್ದರು.

ಕ್ರೀಡಾಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಈರಮ್ಮ ತೋರಣಗಲ್ಲು (ಸ್ಪೆಷಲ್ ಒಲಂಪಿಕ್ನಲ್ಲಿ 4ನೇ ಸ್ಥಾನ), ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಕರೇಗೌಡ್ರ ಮಲ್ಲಿಕಾರ್ಜುನಾ, ಬಿ.ರವಿಶಂಕರ, ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಚಂದ್ರಶೇಖರ್ ಮತ್ತು ವೀಲ್ಹ್ ಚೇರ್ ಬಾಸ್ಕೇಟ್ ಬಾಲ್ನಲ್ಲಿ ರಾಜ್ಯ ಮಟ್ಟದ ಗೋಲ್ಡ್ ಮೆಡಲ್ ಪಡೆದ ಶಾಂತಿ ಅಡಿವೆಮ್ಮ, ಕೊಟ್ರೇಶ್, ಅನಂತಲಕ್ಷ್ಮೀ, ಪಾರ್ವತಿ, ಉಮಾದೇವಿ ಇವರನ್ನು ಗಣ್ಯರಿಂದ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸರ್ಧೆಗಳಲ್ಲಿ ವಿಜೇತರಾದ ವಿಕಲಚೇತನರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

Leave a Reply