ಬೆಂಗಳೂರು: ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿಯ ಸಮೀಕ್ಷೆ ಆಧಾರದಲ್ಲಿ ಸಮುದಾಯದ ಹಿಂದುಳಿದಿರುವಿಕೆ ಗುರುತಿಸಿ ಅವರಿಗೆ ಸೌಲಭ್ಯ ಕಲ್ಪಿಸುತ್ತದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಶಂಕರ ಮಹದೇವ್ ಬಿದರಿ ಹೇಳಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಸಮೀಕ್ಷೆಗಳಲ್ಲಿ ವೀರಶೈವ ಮತ್ತು ಲಿಂಗಾಯತರನ್ನು ಒಂದು ಜಾತಿ ಎಂದು ಪರಿಗಣಿಸಲಾಗಿದೆ. ಪ್ರತ್ಯೇಕ ಧರ್ಮದ ಮಾನ್ಯತೆಯನ್ನು ಅಧಿಕೃತವಾಗಿ ನೀಡಿಲ್ಲ. ಅದನ್ನು ಪರಿಗಣಿಸುವ ಅಗತ್ಯವಿದೆ ಎಂದರು.
ನಮ್ಮ ಸಮಾಜದಲ್ಲಿ ಹಿಂದುಳಿದವರು, ಅತಿ ಹಿಂದುಳಿದವರು ಮತ್ತು ಅತ್ಯಂತ ಹಿಂದುಳಿದವರಿದ್ದಾರೆ. ಹೀಗಾಗಿ ಪಾರದರ್ಶಕವಾಗಿ ವಿವಿಧ ವೃತ್ತಿಯನ್ನು ಮಾಡುವ ಬಡವ ಮತ್ತು ಕಡು ಬಡವರಿಗೆ ಪ್ರಾಮಾಣಿಕವಾಗಿ ಅಂಕ ನೀಡಿ, ಸೂಕ್ತ ಪ್ರವರ್ಗಕ್ಕೆ ಸೇರಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ಕಾರ್ಯದರ್ಶಿ ರೇಣುಕ ಪ್ರಸನ್ನ ಮತ್ತು ವೀಣಾ ಕಾಶಪ್ಪನವರ್ ಪಾಲ್ಗೊಂಡಿದ್ದರು.




