ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಅಂತರ್ಜಲ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ವಿಧೇಯಕ ವಿಧಾನಪರಿಷತ್ ನಲ್ಲಿ ಅಂಗೀಕಾರವಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸಭಾನಾಯಕರೂ ಆಗಿರುವ ಸಣ್ಣ ನೀರಾವರಿ ಸಚಿವ ಭೋಸರಾಜ್, ಕರ್ನಾಟಕ ಅಂತರ್ಜಲ ವಿನಿಯಮನ ಹಾಗೂ ನಿಯಂತ್ರಣ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.
ವಿಧೇಯಕದ ಬಗ್ಗೆ ಸದಸ್ಯರಾದ ಐವಾನ್ ಡಿಸೋಜ, ರವಿಕುಮಾರ್, ನವೀನ್, ನಸೀರ್ ಅಹಮದ್ ಸೇರಿದಂತೆ 15 ಮಂದಿ ಅಂತರ್ಜಲ ಉಳಿಸುವುದು ಶುದ್ಧ ಕುಡಿಯುವ ನೀರನ್ನು ಜನತೆ ನೀಡುವ ಸಂಬಂಧ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಸದಸ್ಯ ರವಿಕುಮಾರ್, ರಾಜ್ಯದ ಜನತೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಸವಾಲಾಗಿ ಪರಿಣಮಿಸಿದೆ ಎಂದರು.
ಸಮುದ್ರಕ್ಕೆ ವ್ಯರ್ಥವಾಗಿ ನೀರು ಸೇರುವುದನ್ನು ನಿಲ್ಲಿಸಿ, ನೀರು ಪೋಲಾಗುವುದನ್ನು ತಡೆಗಟ್ಟಿ ಅಂತರ್ಜಲ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲು ಆಗ್ರಹಿಸಿದರು.
ಸದಸ್ಯರ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ. ನೀರೇ ಭವಿಷ್ಯ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಸಚಿವ ಭೋಸರಾಜ್ ಹೇಳಿ ವಿಧೇಯಕದ ಅಂಗೀಕಾರಕ್ಕೆ ಮನವಿ ಮಾಡಿದರು. ಬಳಿಕ ವಿಧೇಯಕಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.




