ನೀಟ್ ವಿವಾದ ಕುರಿತು ಸಿಬಿಐ ತನಿಖೆ ಕೋರಿ ಅರ್ಜಿ ಸಲ್ಲಿಕೆ
ಕೇಂದ್ರ ಸರ್ಕಾರ, NTA ಗೆ ನೊಟೀಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್
ದೆಹಲಿ: 2024ರ ನೀಟ್ -ಯುಜಿ ಪರೀಕ್ಷೆ ಫಲಿತಾಂಶ ಬಗ್ಗೆ ಹಲವು ಹೈಕೋರ್ಟ್ ಗಳಲ್ಲಿ ಸಲ್ಲಿಕೆಯಾಗಿ ಬಾಕಿ ಉಳಿದಿರುವ ಅರ್ಜಿಗಳನ್ನು ವರ್ಗಾಯಿಸುವಂತೆ ಕೋರಿ ಮತ್ತು ಸಿಬಿಐ ತನಿಖೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ಕುರಿತು ಪ್ರತಿಕ್ರಿಯೆ ಕೇಳಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್ ನೀಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ. ಸಂದೀಪ್ ಮೆಹ್ತಾ ಅವರನ್ನೊಳಗೊಂಡ ರಜಾಕಾಲದ ಪೀಠ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ವಕೀಲರ ವಾದವನ್ನು ಗಮನಿಸಿ ಬಹುಸಂಖ್ಯೆಯ ದೂರುಗಳನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಂಡಿತು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅವ್ಯವಹಾರಗಳ ಆರೋಪಗಳ ಮೇಲೆ 2024 ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಹಲವು ಅರ್ಜಿಗಳು ಹೈಕೋರ್ಟ್ ಗಳಲ್ಲಿ ಸಲ್ಲಿಕೆಯಾಗಿವೆ. ಇವು ಇತ್ಯರ್ಥವಾಗದೆ ಬಾಕಿ ಇವೆ.
ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನೀಟ್ ಪರೀಕ್ಷೆಯಲ್ಲಿನ (NEET-UG 2024) ಇತರ ಅಕ್ರಮಗಳ ಆರೋಪಗಳ ಕುರಿತು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಮನವಿಯ ಕುರಿತು ಸುಪ್ರೀಂಕೋರ್ಟ್ ಕೇಂದ್ರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿ ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಮುಂದಿನ ವಿಚಾರಣೆಯನ್ನು ಜುಲೈ 8 ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಮಧ್ಯೆ, ಹೈಕೋರ್ಟ್‌ಗಳಿಂದ ಉಚ್ಛ ನ್ಯಾಯಾಲಯಕ್ಕೆ ಪ್ರಕರಣಗಳನ್ನು ವರ್ಗಾಯಿಸಲು ಕೋರಿರುವ ಇತರ ಮೂರು ಅರ್ಜಿಗಳನ್ನು ಹಿಂಪಡೆಯಲು ಎನ್‌ಟಿಎ ಬಯಸಿದೆ. ಮೇ 5 ರಂದು ನಡೆದ ಪರೀಕ್ಷೆಯಲ್ಲಿ ಕೃಪಾಂಕಗಳನ್ನು ನೀಡಿದ್ದ 1,563 ಅಭ್ಯರ್ಥಿಗಳಿಗೆ ಜೂನ್ 23ರಂದು ಮರು ಪರೀಕ್ಷೆ ನಡೆಸಲು ನಿರ್ಧರಿಸಿದೆ.
ಎನ್‌ಟಿಎ ಗ್ರೇಸ್ ಮಾರ್ಕ್ ನಿರ್ಧಾರವನ್ನು ಹಿಂಪಡೆದಿದ್ದು, ಜೂನ್ 23 ರಂದು ಮರುಪರೀಕ್ಷೆ ನಡೆಸಲಿದೆ. ಮರು ಪರೀಕ್ಷೆ ಫಲಿತಾಂಶವನ್ನು ಜೂನ್ 30 ರಂದು ಪ್ರಕಟಿಸಲಾಗುವುದು, ಜುಲೈ 6 ರಂದು ಪ್ರಾರಂಭವಾಗುವ ಕೌನ್ಸೆಲಿಂಗ್ ಪ್ರಕ್ರಿಯೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಎನ್ ಟಿ ಎ ಹೇಳಿಕೆ ನೀಡಿದೆ.




