ದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ವೈದ್ಯಕೀಯ ಕಾಲೇಜು ಆಕಾಂಕ್ಷಿಗಳಿಗೆ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET)ಯಲ್ಲಿ ನಡೆದ ಅಕ್ರಮ ಕುರಿತು ವ್ಯಕ್ತವಾಗಿರುವ ಆತಂಕಗಳ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಯಾರಾದೇ ಕಡೆಯಿಂದ 0.001% ನಿರ್ಲಕ್ಷ್ಯವಿದ್ದರೆ, ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಖಡಕ್ ಆಗಿ ಹೇಳಿದೆ.
ಪರೀಕ್ಷೆ ನಡೆಸುತ್ತಿರುವ ಏಜೆನ್ಸಿಯಾಗಿ, ನೀವು ನ್ಯಾಯಯುತವಾಗಿ ವರ್ತಿಸಬೇಕು. ತಪ್ಪಿದ್ದರೆ, ಹೌದು, ಇದು ತಪ್ಪು ಎಂದು ಹೇಳಿ, ಮತ್ತು ಇದು ನಾವು ತೆಗೆದುಕೊಳ್ಳಲಿರುವ ಕ್ರಮ ಎಂದು ಹೇಳಿ. ಇದು ನಿಮ್ಮ ಕಾರ್ಯಕ್ಷಮತೆಯ ಮೇಲೆ ವಿಶ್ವಾಸ ಉಂಟುಮಾಡುತ್ತದೆ ಎಂದು ಎನ್‌ಟಿಎಗೆ ಸುಪ್ರೀಂ ಕೋರ್ಟ್ ಹೇಳಿದೆ.
ದೇಶದ ಅತ್ಯಂತ ಕಠಿಣ ಪ್ರವೇಶ ಪರೀಕ್ಷೆಗೆ ತಯಾರಾಗಲು ವಿದ್ಯಾರ್ಥಿಗಳು ಮಾಡಿದ ಪ್ರಯತ್ನಗಳನ್ನು ಸಂಸ್ಥೆ ಮರೆಯಬಾರದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ವ್ಯವಸ್ಥೆಯಲ್ಲಿ ಮೋಸ ಮಾಡಿದ ವ್ಯಕ್ತಿ ವೈದ್ಯನಾಗುತ್ತಾನೆ ಎಂದು ಕಲ್ಪಿಸಿಕೊಳ್ಳಿ, ಅವನು ಸಮಾಜಕ್ಕೆ ಹೆಚ್ಚು ಹಾನಿ ಮಾಡುತ್ತಾನೆ. ಮಕ್ಕಳು NEET ಪರೀಕ್ಷೆಗಾಗಿ ಕಷ್ಟಪಟ್ಟು ಓದುತ್ತಾರೆ ಎಂದು ಕೋರ್ಟ್ ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 8ಕ್ಕೆ ನಿಗದಿಮಾಡಿದೆ.
ಕಳೆದ ವಾರ NEET-UG ಪರೀಕ್ಷೆಯಲ್ಲಿ 1,563 ಅಭ್ಯರ್ಥಿಗಳಿಗೆ ನೀಡಲಾದ ಗ್ರೇಸ್ ಅಂಕಗಳನ್ನು ರದ್ದುಗೊಳಿಸಲಾಗುವುದು ಮತ್ತು ಅಭ್ಯರ್ಥಿಗಳು ಜೂನ್ 23 ರಂದು ಮತ್ತೊಮ್ಮೆ ಪರೀಕ್ಷೆಯನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿದ್ದರು ಎಂದು ಕಳೆದ ವಾರ NTA ಸುಪ್ರೀಂ ಕೋರ್ಟ್‌ಗೆ ಹೇಳಿಕೆ ನೀಡಿತ್ತು.
ಜೂನ್ 23ರಂದು ಮರು ಪರೀಕ್ಷೆಯ ಫಲಿತಾಂಶಗಳನ್ನು ಜೂನ್ 30 ರ ಒಳಗೆ ಪ್ರಕಟಿಸಬೇಖು ಎಂದು ಕೋರ್ಟ್ ನಿರ್ದೇಶನ ನೀಡಿತ್ತು.
ಈ ಅಭ್ಯರ್ಥಿಗಳಲ್ಲಿ ಯಾರಾದರೂ ಮರು-ಪರೀಕ್ಷೆಯನ್ನು ತೆಗೆದುಕೊಳ್ಳದಿರಲು ನಿರ್ಧರಿಸಿದರೆ, ಹೆಚ್ಚುವರಿ ಅಂಕಗಳಿಲ್ಲದೆ ಅವರ ಹಿಂದಿನ ಸ್ಕೋರ್ ಅನ್ನು ಮರುಸ್ಥಾಪಿಸಲಾಗುತ್ತದೆ.
ಮೇ 5 ರಂದು 24 ಲಕ್ಷ ವಿದ್ಯಾರ್ಥಿಗಳು ತೆಗೆದುಕೊಂಡಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ ಫಲಿತಾಂಶಗಳನ್ನು ಜೂನ್ 4 ರಂದು ಪ್ರಕಟಿಸಲಾಗಿತ್ತು. ಪರೀಕ್ಷೆ ಪತ್ರಿಕೆ ಸೋರಿಕೆಯ ಆರೋಪಗಳು ಕೇಳಿಬಂದಿದ್ದು, 67 ವಿದ್ಯಾರ್ಥಿಗಳು 720/720 ಅಂಕಗಳನ್ನು ಗಳಿಸಿದ್ದರು.
ಪರೀಕ್ಷಾ ಕೇಂದ್ರದಲ್ಲಿ ಸಮಯದ ನಷ್ಟ ಹೊಂದಾಣಿಕೆ ಸಲುವಾಗಿ ಹಲವು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗಿದೆ.
ತಪ್ಪು ಪ್ರಶ್ನೆಪತ್ರಿಕೆಗಳನ್ನು ವಿತರಿಸಲಾಗಿದೆ, ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (OMR) ಹಾಳೆಗಳನ್ನು ಹರಿದುಹಾಕಲಾಗಿದೆ, ಹಾಳೆಗಳ ವಿತರಣೆಯಲ್ಲಿ ವಿಳಂಬ ಸೇರಿದಂತೆ NEET ಅಕ್ರಮಗಳ ಕುರಿತು ಅನೇಕ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.




