ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಹಿರಿಯ ನಾಗರಿಕರ ಬಗ್ಗೆ ನಿರ್ಲಕ್ಷ್ಯ ಬೇಡ, ಆರ್ಥಿಕ ಭದ್ರತೆ, ಸಾಮಾಜಿಕ ರಕ್ಷಣೆ ಬೇಕಿದೆ: ಕೆ.ಎಸ್.ಬಸವಂತಪ್ಪ
ದಾವಣಗೆರೆ: ಪ್ರಸ್ತುತ ದಿನಗಳಲ್ಲಿ ವಿದ್ಯಾವಂತರಿಂದಲೇ ಹಿರಿಯ ನಾಗರಿಕರು ಹೆಚ್ಚಿನ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದರಿಂದ ಅವರಿಗೆ ಆರ್ಥಿಕ ಭದ್ರತೆ ಹಾಗೂ ಸಾಮಾಜಿಕ ರಕ್ಷಣೆ ಒದಗಿಸುವತ್ತ ಗಮನ ನೀಡಬೇಕಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಸಂಘ ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.
ಸಂಸ್ಕೃತಿ, ಸಂಪ್ರದಾಯಗಳಿಗೆ ಹೆಚ್ಚು ಬೆಲೆಕೊಡುವ ನಮ್ಮ ದೇಶದಲ್ಲಿ ಹಿರಿಯ ನಾಗರಿಕರನ್ನು ನಿರ್ಲಕ್ಷಿಸುವ ಮನೋಭಾವ ತರವಲ್ಲ, ಅನುಭವವಿರುವ ಹಿರಿಯ ನಾಗರಿಕರ ಮಾರ್ಗದರ್ಶನ ನಮಗೆ ಬೇಕಾಗುತ್ತದೆ. ಹೀಗಾಗಿ ಅವರ ಗೌರವಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮಹಾನಗರ ಪಾಲಿಕೆ ಮಹಾಪೌರ ಚಮನ್ ಸಾಬ್, ಪಾಲಿಕೆ ಸದಸ್ಯ ಜಿ.ಎಸ್.ಮಂಜುನಾಥ್ ಗಡಿಗುಡಾಳು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಯೋಗೇಂದ್ರ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜನಾಯ್ಕ.ಕೆಎಸ್, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ನಿರ್ದೇಶಕ ಡಾ.ಕೆ.ಕೆ.ಪ್ರಕಾಶ್ ಹಾಗೂ ಹಿರಿಯ ನಾಗರಿಕರು ಹಾಜರಿದ್ದರು.




