ಹುಬ್ಬಳ್ಳಿ: ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಕಂಡು ಬರುತ್ತಿರುವ ಅಪೌಷ್ಟಿಕತೆ ನಿವಾರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಇವರಿಗೆ ವಿತರಿಸಲು ನೀಡಲಾಗಿದ್ದ ಪೌಷ್ಟಿಕ ಆಹಾರಕ್ಕೆ ಕನ್ನ ಹಾಕುತ್ತಿದ್ದ ಜಾಲವನ್ನು ಹುಬ್ಬಳ್ಳಿ – ಧಾರವಾಡ ಪೊಲೀಸರು ಭೇದಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಹಳೇಗಬ್ಬೂರಿನ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದನ್ನು ಪತ್ತೆ ಹಚ್ಚಿದ್ದಾರೆ.
ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಧಿ, ರವಾ, ಅಕ್ಕಿ, ಹಾಲಿನಪುಡಿ, ಬೆಲ್ಲ, ಉಪ್ಪಿಟ್ಟಿನ ಮಸಾಲಾ ಪುಡಿ, ಸಾಂಬಾರ ಮಸಾಲಾ ಪುಡಿ, ಸಕ್ಕರೆ, ಕಡ್ಲೆಬೇಳೆ, ಹೆಸರುಕಾಳು ಸೇರಿದಂತೆ 17 ಬಗೆಯ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸರ್ಕಾರದಿಂದ ಉಚಿತವಾಗಿ ಪೂರೈಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿ, ಅಲ್ಲಿಂದ ಬೇರೆಡೆಗೆ ಸಾಗಾಟ ಮಾಡಲಾಗುತ್ತಿತ್ತು. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಕಮಲವ್ವ ಬೈಲೂರ ಪ್ರಕರಣ ದಾಖಲಿಸಿದ್ದರು.
ತನಿಖೆ ನಡೆಸಿದಾಗ ಪೌಷ್ಟಿಕ ಆಹಾರಗಳನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಮಾಹಿತಿ ದೊರೆತಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿ ಅಂಗನವಾಡಿ ಕಾರ್ಯಕರ್ತೆಯರಾದ ಶಮಿಮಾಬಾನು ಮುಜಾವರ, ಶಮಿಮಾಬಾನು ದಾರುಗಾರ, ಬೇಬಿಆಯಿಶಾ ಕಾರಿಗಾರ, ರೇಷ್ಮಾ ವಡ್ಡೊ, ಶಾಹೀನಾ ಚಕ್ಕೇಹಾರಿ, ಪೈರೋಜಾ ಮುಲ್ಲಾ, ಶಕುಂತಲಾ ನ್ಯಾಮತಿ, ಚಿತ್ರಾ ಉರಾಣಿಕರ ಸೇರಿದಂತೆ ಗೋದಾಮಿನ ಮಾಲೀಕ ಮೊಹ್ಮದ್ಗೌಸ್ ಖಲೀಪಾ, ಬಾಡಿಗೆದಾರ ಗೌತಮಸಿಂಗ್ ಠಾಕೂರ ಸೇರಿ 26 ಮಂದಿಯನ್ನು ಬಂಧಿಸಲಾಗಿದೆ ಎಂದರು.
ಇವರಿಂದ 4 ಲಕ್ಷ ಮೌಲ್ಯದ 329 ಚೀಲಗಳಲ್ಲಿರುವ 4.84 ಟನ್ ವಿವಿಧ ಬಗೆಯ ಪೌಷ್ಟಿಕ ಆಹಾರ ಪದಾರ್ಥಗಳನ್ನು ಹಾಗೂ 3 ಲಕ್ಷ ಮೌಲ್ಯದ ಬುಲೆರೊ ವಾಹನ ವಶಪಡಿಸಿಕೊಳ್ಳಲಾಗಿದೆ. ಇನ್ನೂ ಕೆಲವು ಪ್ರಮುಖ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.




