ಬೆಂಗಳೂರು: ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ನಿಯಮಗಳು ಈ ಕೆಳಗಿನಂತಿವೆ.
1. ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ 100 ಜನರಿಗೆ ಮಾತ್ರ ಅವಕಾಶ
2. ಅರಮನೆ ಆವರಣದಲ್ಲಿ ದಸರಾ ಆಚರಣೆ ಮಾಡಬೇಕು
3. ಜನ ಮಾಸ್ಕ್, ಸ್ಯಾನಿಟೈಸರ್ ಬಳಸುವುದು ಕಡ್ಡಾಯ
4. ವರ್ಚುವಲ್ ಮೂಲಕ ಜಂಬೂಸವಾರಿ ವೀಕ್ಷಣೆಗೆ ಅವಕಾಶ
5. ಮೈಸೂರು ದಸರಾ ಸಾಂಸ್ಕೃತಿ ಕಾರ್ಯಮ್ರಕಗಳಿಗೆ 500 ಜನರಿಗೆ ಮಾತ್ರ ಅವಕಾಶ
6. ಜಂಬೂಸವಾರಿ, ಪಂಜಿನ ಕವಾಯಿತಿಗೆ 500 ಜನರಿಗೆ ಅವಕಾಶ
7. ರಾಜ್ಯದ ಇತರೆ ಜಿಲ್ಲೆಗಳಲ್ಲಿ ದಸರಾ ಆಚರಣೆಗೆ ಅನುಮತಿ
8. ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನ ಸೇರುವಂತಿಲ್ಲ
9. ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ಅನುಮತಿ ಇಲ್ಲ




