ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ಇದೀಗ ಹೊಸ ಕಾನೂನಿನ ಮೂಲಕ ಜನರ ದಟ್ಟಣೆ ನಿಯಂತ್ರಿಸಲು ಮುಂದಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಜನರ ದಟ್ಟಣೆ ನಿಯಂತ್ರಿಸಲು ರಾಜ್ಯ ಸರ್ಕಾರ ಮಾಡಿರುವ ಕಾಯಿದೆಗೆ ರಾಜ್ಯಪಾಲರು ಅಂಕಿತ ಹಾಕಿದ ಬೆನ್ನಲ್ಲೇ ಅದನ್ನು ಅಧಿಸೂಚನೆ ಮೂಲಕ ಪ್ರಕಟಿಸಿದೆ. ಜೊತೆಗೆ ಮೈಸೂರು ದಸರಾ ಉತ್ಸವದ ವೇಳೆಯೆ ಅದನ್ನು ಅನುಷ್ಠಾನಕ್ಕೆ ಮುಂದಾಗಿದೆ. ಜನರ ಸುರಕ್ಷತೆ ಹಿನ್ನೆಲೆಯಲ್ಲಿ ಜಂಬೂ ಸವಾರಿ ಮೆರವಣಿಗೆಯ ಆಸನ ಸಾಮರ್ಥ್ಯವನ್ನು 65 ಸಾವಿರದಿಂದ 40 ಸಾವರಕ್ಕೆ ಇಳಿಸಲು ನಿರ್ಧರಿಸಿದೆ.
ಅಕ್ಟೋಬರ್ 2 ರಂದು ವಿಜಯ ದಶಮಿ ಅಂಗವಾಗಿ ಮೈಸೂರಿನ ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಗೆ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ಬಾರಿ ದಸರಾ ವೀಕ್ಷಣೆಯ ಆಸನಗಳ ಸಾಮರ್ಥ್ಯವನ್ನು ಇಳಿಕೆ ಮಾಡಿದೆ.
ಕನಿಷ್ಠ 25 ಸಾವಿರ ಆಸನಗಳನ್ನು ಕಡಿಮೆ ಮಾಡಲಾಗುವುದು. ದೊಡ್ಡ ಸಭೆಗಳನ್ನು ನಿರ್ವಹಿಸುವ ಬಗ್ಗೆ ಜಾಗೃತರಾಗಲು ಪಾಸ್‍ಗಳ ಸಂಖ್ಯೆಯನ್ನು ಕೂಡ ಕಡಿಮೆ ಮುದ್ರಿಸಲಾಗಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಅಧಿಕಾರಿಗಳು ಮತ್ತು ದಸರಾ ಸಮಿತಿಯ ಸಭೆ ನಡೆಸಿ ದಸರಾ ಸುರಕ್ಷತಾ ಕ್ರಮ ಹಾಗೂ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
ಕಳೆದ ವರ್ಷ 60 ಸಾವಿರ ಆಸನ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಈ ಬಾರಿ 40 ಸಾವಿರ ಆಸನಗಳನ್ನು ಹಾಕಲು ನಿರ್ಧರಿಸಲಾಗಿದೆ. ಜಂಬೂ ಸವಾರಿಗೆ ಹೆಚ್ಚು ಜನರು ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ವೀಕ್ಷಿಸಲು ದೇಶ-ವಿದೇಶದಿಂದಲೂ ಸಹ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.
ಪ್ರತಿ ವರ್ಷ ಪಾಸ್‍ಗಳ ಅವ್ಯವಸ್ಥೆ, ಸಾಮರ್ಥ್ಯಕ್ಕಿಂತ ಹೆಚ್ಚಿನ ಪಾಸ್‍ಗಳನ್ನು ಮುದ್ರಿಸಲಾಗುತ್ತದೆ ಎಂಬ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ವರ್ಷ ಉಪಸಮಿತಿಯು ಆಸನ ಲಭ್ಯತೆ ಇರುವಷ್ಟು ಮಾತ್ರ ಪಾಸ್‍ಗಳನ್ನು ಮುದ್ರಿಸಲು ನಿರ್ಧರಿಸಿದೆ.




