ರಾಜ್ಯ ಬಜೆಟ್ ನಲ್ಲಿರುವ ಹೊಸ ಯೋಜನೆಗಳು

3 years ago

ಬೆಂಗಳೂರು: ಸಂಪನ್ಮೂಲ ಕ್ರೋಡೀಕರಣಕ್ಕೆ ಒತ್ತು ‌ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ ನಲ್ಲಿ ಜಿಎಸ್ ಟಿ ಪೂರ್ವ ತೆರಿಗೆ ವಿವಾದ ತ್ವರಿತ ಇತ್ಯರ್ಥಕ್ಕೆ ಕರಸಮಾಧಾನ ಯೋಜನೆಯನ್ನು ಪ್ರಕಟಿಸಿದ್ದಾರೆ.

ಈ ಕರಸಮಾಧಾನ ಯೋಜನೆಯ ಮೂಲಕ ತೆರಿಗೆ ಬಾಕಿಗಳನ್ನು ಯಾವುದೇ ದಾವೆಯಿಲ್ಲದೇ ಕ್ಷಿಪ್ರವಾಗಿ ಸಂಗ್ರಹಿಸಲು ಸಾಧ್ಯವಾಗುತ್ತದೆ ಹಾಗೂ ಈ ಯೋಜನೆಯಡಿ ಎಲ್ಲಾ ಜಿಎಸ್ ಟಿ-ಪೂರ್ವ ಅಧಿನಿಯಮಗಳ ಅಡಿಯಲ್ಲಿ ಬಾಕಿ ಇರುವ ಪೂರ್ಣ ತೆರಿಗೆಯನ್ನು 2023 ರ ಅ.30 ರ ಒಳಗೆ ಪಾವತಿಸುವವರಿಗೆ ಬಡ್ಡಿ ಮತ್ತು ದಂಡಬಡ್ಡಿ ಪಾವತಿಯಲ್ಲಿ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ವೃತ್ತಿ ತೆರಿಗೆ ಅಧಿನಿಯಮವನ್ನು ತಿದ್ದುಪಡಿ ಮಾಡಿ ಸರಳೀಕರಣಗೊಳಿಸಿ ಕಡಿಮೆ ವರಮಾನದ ವರ್ಗಕ್ಕೆ ಪರಿಹಾರ ನೀಡಲು ಸಂಬಳ ಅಥವಾ ಮಜೂರಿಯನ್ನು ಪಡೆವ ನೌಕರರಿಗೆ ತೆರಿಗೆ ವಿನಾಯಿತಿ ಮಿತಿಯನ್ನು ಮಾಸಿಕ 15ರಿಂದ 25೦೦೦ ರೂ. ಗಳಿಗೆ ಏರಿಕೆ ಮಾಡಲಾಗುವುದೆಂದು ಹೇಳಿದ್ದಾರೆ.

ಬಜೆಟ್ ನಲ್ಲಿರುವ ಹೊಸ ಯೋಜನೆಗಳು

೧.ರೈತರಿಗಾಗಿ ‘ಭೂ ಸಿರಿ’ ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು, ಇದರಡಿಯಲ್ಲಿ 10 ಸಾವಿರ ರೂಪಾಯಿ ಹೆಚ್ಚುವರಿ ಸಹಾಯಧನ

೨.ರೈತ ಸಿರಿ’ ಯೋಜನೆ ಅಡಿ ಕಿರುಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ

೩.ವಿದ್ಯಾವಾಹಿನಿ’ ಯೋಜನೆಯಡಿ ವಿದ್ಯಾರ್ಥಿನಿಯರಿಗೆ 350 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ

೪. ‘ಗೃಹಿಣಿ ಶಕ್ತಿ’ ಯೋಜನೆ ಜಾರಿ ಮಾಡಿ, 46,278 ಕೋಟಿ ರೂಪಾಯಿ ಅನುದಾನ

೫ .ನಮ್ಮ ನೆಲೆ’ ಯೋಜನೆಯಡಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನಿವೇಶನ.

೬.’ಸಹ್ಯಾದ್ರಿ ಸಿರಿ’ ಯೋಜನೆ ಅಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡಿನಲ್ಲಿ ನೀರು ಸಂರಕ್ಷಣೆಗೆ ಹಾಗೂ ತೋಟಗಾರಿಕೆ ಉತ್ಪಾದಕತೆ ಹೆಚ್ಚಿಸಲು ‘ಒಂದು ತೋಟ ಒಂದು ಬೆಳೆ’ ಯೋಜನೆಗೆ 10 ಕೋಟಿ ರೂಪಾಯಿ ಮೀಸಲು

೭.ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ‘ಮತ್ಸ್ಯ ಸಿರಿ’ ಯೋಜನೆ

೮.ಮುಖ್ಯಮಂತ್ರಿ ವಿದ್ಯಾ ಶಕ್ತಿ’ ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ.

೯. ‘ಸಹಸ್ರ ಸರೋವರ’ ಯೋಜನೆ ಅಡಿ ರಾಜ್ಯದ 1,000 ಸಣ್ಣ ಸರೋವರಗಳ ಅಭಿವೃದ್ಧಿ
೧೦. ‘ಬದುಕುವ ದಾರಿ’ ಯೋಜನೆಯಡಿ ಯುವಜನರಿಗೆ 3 ತಿಂಗಳು ಐಟಿಐ ತರಬೇತಿ.
೧೧. ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ‘ಯುವಸ್ನೇಹಿ’ ಯೋಜನೆಯಡಿ 2 ಸಾವಿರ ರೂಪಾಯಿ ನೆರವು.

೧೨. 100 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಲೆಗೆ ತೆರಳಲು ‘ಮಕ್ಕಳ ಬಸ್’ ಯೋಜನೆ .

೧೩.ಜಲನಿಧಿ’ ಯೋಜನೆಯಡಿ ರೈತರ ಜಮೀನುಗಳಲ್ಲಿ ಜಲ ಹೊಂಡ, ಗೋ ಶಾಲೆಗಳ ನಿರ್ಮಾಣಕ್ಕೆ ‘ಪುಣ್ಯ ಕೋಟಿ ದತ್ತು ಯೋಜನೆ.

೧೪.ಸ್ವಚೇತನ’ ಯೋಜನೆಯಡಿ 5 ಸಾವಿರ ಅಂಗವಿಕಲರಿಗೆ ದ್ವಿಚಕ್ರ ವಾಹನ

Leave a Reply