ಬೆಂಗಳೂರು: ಯಲಹಂಕ ಕೋಗಿಲು ಲೇಔಟ್ನಲ್ಲಿ ಅಕ್ರಮವಾಗಿ ಕೆಲವು ನಿವಾಸಿಗಳಿಗೆ ಮನೆ ಕಟ್ಟಿದ ಸಂಬಂಧ ಸಿದ್ಧಪಡಿಸಿ ನೀಡಲಾಗಿರುವ ದಾಖಲೆಗಳ ಕುರಿತು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ವಿವಾದಿತ ಪ್ರದೇಶಕ್ಕೆ ವಿಧಾನ ಪರಿಷತ್ನ ವಿಪಕ್ಷ
ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಮತ್ತಿತರ ನಿಯೋಗ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಇಲ್ಲಿನ ನಿವಾಸಿಗಳು ಕೇವಲ 6 ತಿಂಗಳ ಹಿಂದೆ ಬಂದಿದ್ದಾರೆಂಬ ಮಾಹಿತಿ ಇದೆ. ಇವರಿಗೆ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಡಿತರಚೀಟಿ ಸೇರಿದಂತೆ ಇತರ ದಾಖಲೆಗಳನ್ನು ನೀಡಿದವರು ಯಾರು? ಸತ್ಯಸತ್ಯತೆ ಹೊರಬರಲು ಎನ್ಐಎ ತನಿಖೆ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಮುಖ್ಯಮಂತ್ರಿ ಸೂಚನೆ ಮೇರೆಗೆ ಅಧಿಕಾರಿಗಳು ಪ್ರಕರಣ ಕುರಿತು ತನಿಖೆ ನಡೆಸುತ್ತಿದ್ದಾರೆ. ಅಂತಿಮ ವರದಿ ಬರುವವರೆಗೂ ಯಾವುದೇ ಕಾರಣಕ್ಕೂ ಮನೆ ಹಂಚಿಕೆಯಾಗಲಿ ಇಲ್ಲವೇ ನಿವೇಶನ ಕೊಡುವುದನ್ನು ಮಾಡಬಾರದು. ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಡಬೇಕೆಂದು ಸಲಹೆ ಮಾಡಿದರು.
ಅಧಿಕಾರಿಗಳು ಈ ವಿಚಾರದಲ್ಲಿ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.
ಸರ್ಕಾರಗಳು ಬರುತ್ತವೆ ಹೋಗುತ್ತವೆ. ಇಂದು ಅಧಿಕಾರದಲ್ಲಿದ್ದ ಪಕ್ಷ ನಾಳೆ ಇರುವುದಿಲ್ಲ. ಪ್ರತಿಪಕ್ಷದಲ್ಲಿದ್ದವರು ಅಧಿಕಾರಕ್ಕೆ ಬರುತ್ತಾರೆ. ಆದರೆ ಅಧಿಕಾರಿಗಳು ಬದಲಾಗುವುದಿಲ್ಲ ಎಂಬುದನ್ನು ಮರೆಯಬಾರದು. ಆತುರಾತುರವಾಗಿ ಇವರಿಗೆ ಮನೆ ಇಲ್ಲವೇ ಪುನರ್ವಸತಿ ಕಲ್ಪಿಸಲು ಮುಂದಾದರೆ ಮುಂದಾಗುವ ಸಮಸ್ಯೆಗಳಿಗೆ ನೀವೇ ಜವಾಬ್ದಾರರು ಎಂದು ಎಚ್ಚರಿಕೆ ನೀಡಿದರು.
ಕೋಗಿಲು ಲೇಔಟ್ ಅನ್ನು ಮಿನಿ ಬಾಂಗ್ಲಾದೇಶ ಮಾಡಲು ಹೊರಟಿದ್ದಾರೆ. ಡ್ರಗ್ಸ್ ಸಮಸ್ಯೆ ಎದುರಾಗಿದೆ. ಪೊಲೀಸರೂ ಇದರ ಭಾಗ ಆಗುತ್ತಿದೆ. ಬೆಂಗಳೂರಿನ ಒಂದೊಂದು ಕಡೆ ಉಡ್ತಾ ಬಾಂಗ್ಲಾ ಅಗುತ್ತಿದೆ. ಇವರಿಗೆ ಕೆಲಸ ಎಲ್ಲಿಂದ ಸಿಗತ್ತದೆ. ಕೆಲಸ ಕೊಡೋರು ಯಾರು? ಇದಕ್ಕೆ ಹೊಣೆ ಯಾರು? ಎಂದು ಪ್ರಶ್ನಿಸಿದರು.
ಬರ್ತ್ ಸರ್ಟಿಫಿಕೇಟ್ ಇಲ್ಲದೆಯೇ ಇವರಿಗೆ ಮನೆ ಕೊಡಲು ಹೊರಟಿದ್ದಾರೆ. ರೇಷನ್ ಕಾರ್ಡ್ ಆಧಾರ್ ಕಾರ್ಡ್ ಎಲ್ಲಿನದ್ದು? ಯಾರು ಕೊಟ್ಟರು? 600 ಕೋಟಿ ಬೆಲೆಯ ಈ ಭೂಮಿಯನ್ನ ಸಿದ್ದರಾಮಯ್ಯ ಮತ್ತವರ ಪಕ್ಷ ಹೇಗೆ ಇವರಿಗೆ ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ಟ್ವೀಟ್, ಕೇರಳದ ಒತ್ತಡಕ್ಕೆ ಸರ್ಕಾರ ತಲೆ ಬಾಗಿದೆ. ಪಾಕಿಸ್ತಾನದ ಫಾರಿನ್ ಅಫೇರ್ ಮಿನಿಸ್ಟರ್ ಈ ಬಗ್ಗೆ ಮಾತನಾಡುತ್ತಾರೆ ಎಂದರೆ ಹೇಗೆ ಸಾಧ್ಯ? ಇಲ್ಲಿರೋ ಸ್ಲೀಪರ್ ಸೆಲ್, ಟೆರೆರೆಸ್ಟ್ ಇದರ ಬಗ್ಗೆ ಅವರಿಗೆ ಮಾಹಿತಿ ಕೊಟ್ಟಿದ್ದಾರೆ ಎಂದು ದೂರಿದರು.




