ಧರ್ಮಸ್ಥಳ ಅಸಹಜ ಸಾವು ಪ್ರಕರಣ ಕುರಿತು ಎನ್ ಐ ಎ ತನಿಖೆ ನಡೆಸಿ: ಅಮಿತ್ ಶಾಗೆ ಮನವಿ

7 months ago

ದೆಹಲಿ: ಪಂಚಮಸಾಲಿ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗ ದೆಹಲಿಗೆ ತೆರಳಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿ ವಿವಿಧ ಪೀಠಗಳ 8 ಸ್ವಾಮೀಜಿಗಳ ನಿಯೋಗದಲ್ಲಿದ್ದರು.

ಇವರುಗಳೆಲ್ಲ ಅಸಹಜ ಸಾವು ಆರೋಪ ಪ್ರಕರಣದ ಮೂಲಕ ಧರ್ಮಸ್ಥಳದ ಖ್ಯಾತಿಗೆ ಧಕ್ಕೆ ತರಲು ವ್ಯವಸ್ಥಿತ ಪಿತೂರಿ ನಡೆದಿದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ಆಯೋಗದಿಂದ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. 

ಇದಕ್ಕೆ ಪ್ರತಿಕ್ರಿಯಿಸಿರುವ ಅಮಿತ್ ಶಾ, ಪ್ರಕರಣದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಈ ಭೇಟಿಯ ನಂತರ ವಚನಾನಂದ ಶ್ರೀಗಳು ತಿಳಿಸಿದ್ದಾರೆ. 

Leave a Reply