ದಾವಣಗೆರೆ: ಪ್ರತಿ ಜಿಲ್ಲೆಯಲ್ಲಿ ಪ್ರತಿ ತಿಂಗಳ 27 ರಂದು ನಿಧಿ ಆಪ್ಕೆ ನಿಕಾಟ್ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಯ ಅಗತ್ಯಗಳನ್ನು ಪೂರೈಸುವ ಇಪಿಎಫ್‌ಒ (ನೌಕರರ ಭವಿಷ್ಯ ನಿಧಿ ಸಂಸ್ಥೆ), ಜಿಲ್ಲೆಗಳಲ್ಲಿ ಹೆಜ್ಜೆ ಗುರುತು ಮತ್ತು ಉಪಸ್ಥಿತಿಯನ್ನು ಹೆಚ್ಚಿಸುವ ಉದ್ದೇಶದಿಂದ ಮತ್ತು ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ದಾವಣಗೆರೆ ಜಿಲ್ಲೆಯಲ್ಲಿ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮ ಎಂ.ಕೆ.ಈ.ಟಿ.ಎಲ್.ಕೆ ಆಂಗ್ಲ ಮಾಧ್ಯಮ ಸಿಬಿಎಸ್‌ಸಿ ವಿದ್ಯಾಲಯ, ಹರಪನಹಳ್ಳಿ ರಸ್ತೆ ಹರಿಹರ ದಾವಣಗೆರೆ-577601, ಇಲ್ಲಿ ಮಾರ್ಚ್ 27 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ, ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ 4 ಗಂಟೆಯವರೆಗೆ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಪ್ರಾದೇಶಿಕ ಭವಿಷ್ಯ ನಿಧಿ ಕಮೀಷನರ್ ತಿಳಿಸಿದ್ದಾರೆ.




