ಬಳ್ಳಾರಿ: ಕಾರ್ಮಿಕರ ಭವಿಷ್ಯ ಸಂಸ್ಥೆ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ ಎಂಬ ಅಂಶದಡಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮವನ್ನು ಮಾ.27 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಡೂರು ತಾಲ್ಲೂಕಿನ ವಡ್ಡು ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ತಿಳಿಸಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಕಾರ್ಮಿಕರ, ಪಿಂಚಣಿದಾರರ ಮತ್ತು ಉದ್ಯೋಗದಾತರರ ಕುಂದು ಕೊರತೆ ಪರಿಹಾರ, ಮಾಹಿತಿ ವಿನಿಮಯ ಮಾಡಿಕೊಳ್ಳಬಹುದು. ಉದ್ಯೋಗದಾತರ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಅರಿವು, ಕಾರ್ಮಿಕರಿಗೆ, ಉದ್ಯೋಗದಾತರಿಗೆ, ಪ್ರಧಾನ ಉದ್ಯೋಗದಾತರಿಗೆ ಮತ್ತು ಗುತ್ತಿಗೆದಾರರಿಗೆ ಲಭ್ಯವಿರುವ ಆನ್ಲೈನ್ ಸೇವೆಗಳ ಮಾಹಿತಿ, ಹೊಸ ಉಪಕ್ರಮಗಳು ಹಾಗೂ ಸುಧಾರಣೆ ಕ್ರಮಗಳ ಕುರಿತು ಮಾಹಿತಿ ಒದಗಿಸುವ ಕಾರ್ಯಕ್ರಮವಾಗಿದೆ.
ಕಾರ್ಮಿಕರು, ಪಿಂಚಣಿದಾರರು, ಉದ್ಯೋಗದಾತರು ಮಾ.27 ರಂದು ನಡೆಯುವ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು.




