ರಾಜ್ಯದ ಎಲ್ಲ ವರ್ಗಗಳ ಬಡ ಜನರ ಏಳಿಗೆಗಾಗಿ ಮಾನ್ಯ ಮುಖ್ಯಮಂತ್ರಿಗಳಾದ Siddaramaiah ರವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರುಗಳು ಆರಂಭದಿಂದಲೂ ಊಹಾಪೋಹದ ಮಾತುಗಳನ್ನು ಆಡುತ್ತ ಬಂದಿದ್ದಾರೆ. ಈಗ ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಂದುವರಿಸಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ, ಕೇಂದ್ರದಲ್ಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರೇ, ನೀವು ಮಂಡಿಸಿರುವ 2025-26ನೇ ಸಾಲಿನ ಕೇಂದ್ರದ ಬಜೆಟ್‌ನಲ್ಲಿ ರಾಜ್ಯದ ಅಭಿವೃದ್ಧಿಗೆ ಒಳ್ಳೆಯ ಅನುದಾನ ನೀಡಲು ನಿಮ್ಮಿಂದ ಸಾಧ್ಯವಾಗಿಲ್ಲ. ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಮಹತ್ವಕಾಂಕ್ಷೆ ಯೋಜನೆಯನ್ನು ನೀಡುವ ಮೂಲಕ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಬಹುದಿತ್ತು.
ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ 5000 ಕೋಟಿ ರೂ. ಅನುದಾನ ಕೊಡುತ್ತೇವೆ. ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಬಜೆಟ್‌ನಲ್ಲಿ ಓದಿ, ಅನುದಾನ ನೀಡದಿರುವುದಕ್ಕೆ ರಾಜ್ಯದ ಜನತೆಗೆ ಏನೆಂದು ಉತ್ತರಿಸುತ್ತೀರಿ? ರಾಜ್ಯದ ಹಿತ ಕಾಪಾಡುವಲ್ಲಿ ನೀವು ಸಂಪೂರ್ಣವಾಗಿ ವಿಫಲರಾಗಿರುವುದು ಸ್ಪಷ್ಟವಾಗಿದೆ.
ನಿಮ್ಮ ವೈಫಲ್ಯತೆಯನ್ನು ಮುಚ್ಚಿಕೊಳ್ಳುವ ಉದ್ದೇಶದಿಂದ ಜನರ ದಿಕ್ಕುತಪ್ಪಿಸುವ ಸುಳ್ಳು ಹೇಳಿಕೆಗಳನ್ನು ನೀಡಿ ವಿಷಯಾಂತರ ಮಾಡುತ್ತಿರುವುದು ಹಾಸ್ಯಸ್ಪದ. ಕೈಲಾಗದವರು ಮೈ ಪರಚಿಕೊಂಡರು ಎಂಬಂತಿದೆ ನಿಮ್ಮ ಮಾತುಗಳು.
– ಡಾ ಜಿ ಪರಮೇಶ್ವರ್, ಗೃಹ ಸಚಿವ




