ಜಮೀನಿನ ಪಹಣಿಯ ಯಾವುದೇ ಕಾಲಂನಲ್ಲಿ ವಕ್ಫ್ ಆಸ್ತಿ ಎಂದು ಇರಬಾರದು: ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ: ರೈತರು, ಸಂಘ-ಸಂಸ್ಥೆಗಳ, ಮಠಗಳ ಮತ್ತು ಸರ್ಕಾರಿ ಜಮೀನುಗಳ ಪಹಣಿಯಲ್ಲಿ ವಕ್ಪ್ ಆಸ್ತಿ ಎಂದು ನಮೂದು ಮಾಡಿರುವುದನ್ನು ತೆಗೆಯುವಂತೆ ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಜಿಲ್ಲಾಧಿಕಾರಿ ಕಚೇರಿ ಹೊರ ಭಾಗದಲ್ಲಿ ಸಮಾವೇಶಗೊಂಡು ಅಹೋರಾತ್ರಿ ಧರಣಿ ಆರಂಭಿಸಿದರು.
ಈ ವೇಳೆ ಮಾತನಾಡಿದ ಅವರು, ಜಮೀನಿನ ಪಹಣಿಯ ಯಾವುದೇ ಕಾಲಂದಲ್ಲಿಯೂ ವಕ್ಫ್ ಆಸ್ತಿ ಎಂದು ಇರಬಾರದು. ಪಹಣಿಯಲ್ಲಿ ರೈತರ ಹೆಸರು ಮಾತ್ರ ಇರಬೇಕು. ರೈತರ ಆಸ್ತಿಗಳಿಗೆ ಸಂಬಂಧಿಸಿದ ತಕರಾರು ಸಾಮಾನ್ಯ ಕೋರ್ಟ್ ಗಳಲ್ಲೇ ಇತ್ಯರ್ಥ ಆಗಬೇಕು. ವಕ್ಫ್ ನ್ಯಾಯಾಲಯಕ್ಕೆ ಅವಕಾಶ ಕಲ್ಪಿಸಬಾರದು. ವಕ್ಫ್ ಅದಾಲತ್ ಮಾಡುವುದರಿಂದ ಸರ್ಕಾರಿ ನ್ಯಾಯಾಲಯಕ್ಕೆ ಮಹತ್ವ ಕಡಿಮೆ ಆಗಲಿದೆ. ಎಲ್ಲಿಯೂ ವಕ್ಫ್ ಅದಾಲತ್ ನಡೆಸಬಾರದು ಎಂದರು.
ಈಗಾಗಲೇ ವಕ್ಫ್ ಆಸ್ತಿ ಅಂತ ನಮೂದು ಆಗಿದ್ದನ್ನು ತೆಗೆದು ಹಾಕಬೇಕು. ಮುಂದಿನ ದಿನಗಳಲ್ಲಿ ನೋಟಿಸ್ ನೀಡದಂತೆ ಜಿಲ್ಲಾಧಿಕಾರಿ ಲಿಖಿತವಾಗಿ ಆದೇಶ ಹೊರಡಿಸಬೇಕು. ವಕ್ಫ್ ಕಾಯ್ದೆಯನ್ನು ರದ್ದುಪಡಿಸಬೇಕು. ಇಡೀ ದೇಶದ ಎಲ್ಲ ರಾಜ್ಯಗಳಲ್ಲಿಯ ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು. ವಕ್ಪ್ ಆಸ್ತಿ ದೇಶದ ಆಸ್ತಿಯೆಂದು ಸರ್ಕಾರದ ಸುಪರ್ದಿಗೆ ಪಡೆಯಬೇಕು. 1974ರ ಮತ್ತು ತದ ನಂತರದ ವಕ್ಫ್ ಗೆಜೆಟ್ ನೋಟಿಫಿಕೇಶನ್ ಗಳನ್ನು ಹಿಂಪಡೆಯಬೇಕು. ಇಲ್ಲಿಯವರೆಗಿನ ವಕ್ಫ್ ಬೋರ್ಡ್ ಗಳಿಸಿದ ಆದಾಯವನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದರು.
ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಈ ಎಲ್ಲ ಬೇಡಿಕೆ ಈಡೇರುವವರೆಗು ಹೋರಾಟ ನಿಲ್ಲುವುದಿಲ್ಲ ಎಂದರು.
ಯತ್ನಾಳ್ ಧರಣಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಗೆ ವ್ಯವಸ್ಥೆ ಮಾಡಲಾಗಿದೆ.




