ನೀರಾವರಿ ವಿಷಯದಲ್ಲಿ ರಾಜ್ಯದ ಹಿತ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ: ಡಿ.ಕೆ.ಶಿವಕುಮಾರ್

3 years ago

#Nocompromise #protection #state #interest #irrigation #DKSivakumar

ಬೆಂಗಳೂರು: ನೀರಾವರಿ ವಿಷಯದಲ್ಲಿ ರಾಜ್ಯದ ಹಿತ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಮಹಾದಾಯಿ, ಕೃಷ್ಣಾ, ಮೇಕೆದಾಟು, ಕಾವೇರಿ ನದಿ ನೀರು ಹಂಚಿಕೆ ಹಾಗೂ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಇರುವ ಸಮಸ್ಯೆಗಳ ಪರಿಹಾರಕ್ಕೆ ಪ್ರಧಾನಿಗಳ ಮಧ್ಯ ಪ್ರವೇಶಕ್ಕೆ ಒತ್ತಾಯಿಸಲು ಕರ್ನಾಟಕ ಸರ್ವ ಪಕ್ಷಗಳ ಸಭೆ ತೀರ್ಮಾನಿಸಿದೆ.

ಸಭೆಯಲ್ಲಿ ಮಾತಾಡಿದ ಡಿ.ಕೆ.ಶಿವಕುಮಾರ್, ಸರ್ಕಾರದ ಕಾನೂನು ಹೋರಾಟ ಮುಂದುವರೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರ ಸಹಕಾರ ಕೋರಿದರು.

ಕರ್ನಾಟಕ ಮತ್ತು ಕೇರಳದ ಕಾವೇರಿ ಕಣಿವೆಯ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್ ವೈಫಲ್ಯದಿಂದಾಗಿ 2023-24ರ ಜಲ ವರ್ಷವು ಸಂಕಷ್ಟದ ವರ್ಷವಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್ 10 ರಂದು 15,000 ಕ್ಯೂಸೆಕ್ ನೀರು ಬಿಡಲು ಸೂಚಿಸಿತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣ 10,000 ಕ್ಯೂಸೆಕ್ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಶುಕ್ರವಾರ ಮೂರು ನ್ಯಾಯಾಧೀಶರ ಪೀಠದ ಮುಂದೆ ವಿಚಾರಣೆಗೆ ಬರಲಿದೆ ಎಂದು ತಿಳಿಸಿದರು.

Leave a Reply