ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ ಮುಂದೆ ಯಾರು ಮುಖ್ಯಮಂತ್ರಿ? ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಅರಣ್ಯ ಭವನದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟದ ಉಪ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ ಎಂದರು.
ಈ ಸಮಿತಿಗೆ ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್‌ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್- 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಿಎಸ್ ಐ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಆಯೋಗವು ವರದಿಯನ್ನು ನೀಡಿದ್ದು, ಈ ಹಗರಣದ ಬಗ್ಗೆ ವಿಶೇಷ ತನಿಖಾ ತಂಡಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ ಎಂದರು.


