ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ

2 years ago

ವಕ್ಫ್ ವಿವಾದ: ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ತೆರವು ವಿಚಾರ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಮಧ್ಯಪ್ರವೇಶಿಸಿಸಿರುವ ಸಿಎಂ ಸಿದ್ದರಾಮಯ್ಯ ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಎಂದು ಅಭಯ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಕ್ಫ್ ಆಸ್ತಿ ಒತ್ತುವರಿ ಮಾಡಲಾಗಿದೆ ಎಂದು ಯಾವುದಾದರೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ವಕ್ಫ್ ಸಚಿವ ಜಮೀರ್ ಅಹ್ಮದ್ ಅವರು ನಿನ್ನೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದರು.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ತೀರ್ಮಾನಿಸಲಾಗಿದ್ದು, ಒಳಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಧಿ ನೀಡಲಾಗುವುದು. ಈಗಾಗಲೇ ನೇಮಕಾತಿಗೆ ಮಾಡಿರುವ ಅಧಿಸೂಚನೆಗಳನ್ನು ಹೊರತುಪಡಿಸಿ, ಏಕ ಸದಸ್ಯ ಆಯೋಗದ ವರದಿ ಬರುವವರೆಗೆ ಎಲ್ಲ ಸರ್ಕಾರಿ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸುವುದಿಲ್ಲ ಎಂದರು.

Leave a Reply