ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬೆಂಬಲಿಗರು ದೆಹಲಿಗೆ ಪ್ರವಾಸ ಕೈಗೊಳ್ಳುತ್ತಿರುವ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಈ ವಿಚಾರದಲ್ಲಿ ಹೈಕಮಾಂಡ್ ತಕ್ಷಣವೇ ತಮ್ಮ ನಿಲುವು ಪ್ರಕಟಿಸಬೇಕು ಎಂದರು.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಶಾಸಕರು ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಸಂಪೂರ್ಣ ಸ್ವತಂತ್ರರಿದ್ದಾರೆ. ಇದನ್ನು ನಾನು ಪ್ರಶ್ನಿಸುವುದಿಲ್ಲ. ಆದರೆ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು ಎಂದರು.
ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ತಮ್ಮ ಅಭಿಪ್ರಾಯಗಳನ್ನು ಹೇಳುತ್ತಿದ್ದಾರೆ. ಅದನ್ನು ಕೇಳಿಸಿಕೊಳ್ಳುತ್ತಿರುವ ವರಿಷ್ಠರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕಾದು ನೋಡುತ್ತಿದ್ದೇನೆ. ಆ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದರು.
ಸಂಪುಟ ಪುನಾರಚನೆ ಕುರಿತಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ತಾವು ರಾಹುಲ್ ಗಾಂಧಿ ಸೇರಿದಂತೆ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮ ಹಾಗೂ ಉದ್ದೇಶ ಇಲ್ಲ ಎಂದರು.




