ಕರ್ನಾಟಕ ವೈದ್ಯಕೀಯ ಮಂಡಳಿ ಸದಸ್ಯ ಡಾ.ಎಚ್.ಎನ್.ರವೀಂದ್ರ ಹೇಳಿಕೆ
ಚಿತ್ರದುರ್ಗ: ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ರೋಗಿಗಳ ದಾಖಲೆ ನಿರ್ವಹಣೆಯಲ್ಲಿ ಬೇಜವಾಬ್ದಾರಿ ತೋರಬಾರದು. ಒಂದು ವೇಳೆ ನಿರ್ಲಕ್ಷ್ಯದಿಂದ ದಾಖಲೆಗಳ ನಿರ್ವಹಣೆ ಮಾಡಿದರೆ ಸಮಸ್ಯೆಗಳಿಗೆ ತುತ್ತಾಗಬೇಕಾಗುತ್ತದೆ ಎಂದು ಕರ್ನಾಟಕ ವೈದ್ಯಕೀಯ ಮಂಡಳಿ ಸದಸ್ಯ ಡಾ.ಎಚ್.ಎನ್.ರವೀಂದ್ರ ಎಚ್ಚರಿಕೆ ನೀಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅತಿಸಾರ ತಡೆಗಟ್ಟುವ ಅಭಿಯಾನ ಹಾಗೂ ರೋಗಿಗಳ ಕೇಸ್ ಶೀಟ್ ದಾಸ್ತಾವೇಜು ಮತ್ತು ದಾಖಲೆ ನಿರ್ವಹಣಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ತಾಯಿ ಮತ್ತು ಶಿಶು ಮರಣ ಪ್ರಕರಣದಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ನಮೂನೆ ಭರ್ತಿ ಮಾಡುವಲ್ಲಿ ನಿರ್ಲಕ್ಷ್ಯ ಮಾಡಿ ಹಲವಾರು ಸಮಸ್ಯೆಗಳಿಗೆ ಕಾರಣರಾಗುತ್ತಾರೆ. ದಾಖಲಿಸುವ ಸಮಯದಲ್ಲಿ ಜಾಗರೂಕರಾಗಿ ಇರಬೇಕು. ದಾಖಲೆಗಳನ್ನು ತಪ್ಪಾಗಿ ಬರೆಯುವುದು, ತಿದ್ದುವುದು ಹಾಗೂ ವೈಟ್ನರ್ ಬಳಸಿದರೆ, ನೀವು ತಪ್ಪಿತಸ್ಥರಾಗುತ್ತೀರಿ ಎಂದರು.
ದಾಖಲೆಗಳು ಸರಿಯಿಲ್ಲದಿದ್ದರೆ, ವೈದ್ಯರು ನಿರ್ಲಕ್ಷ ತೋರಿದರೆ, ಬಹಳಷ್ಟು ದಂಡ ತೆರಬೇಕಾಗುತ್ತದೆ. ಕಾನೂನಿನ ಸಂಘರ್ಷಕ್ಕೂ ಒಳಗಾಗಬೇಕಾಗುತ್ತದೆ. ನಿರ್ಲಕ್ಷ್ಯ ತೊರಿ ಪಶ್ಚಾತ್ತಾಪಕ್ಕೆ ಒಳಗಾಗುವ ಬದಲು, ಅಂದಿನ ಕೆಲಸವನ್ನು ಅಂದೇ ಜವಬ್ದಾರಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಿದರೆ ಸಮಸ್ಯೆಗಳಿಂದ ಪಾರಾಗಬಹುದು ಎಂದರು.
ಓ.ಆರ್.ಎಸ್ ಹಾಗೂ ಜಿಂಕ್ ಮಾತ್ರೆ ವಿತರಣೆ: ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಿ.ಪಿ. ರೇಣುಪ್ರಸಾದ್, ಜಿಲ್ಲೆಯಾದ್ಯಂತ ಜುಲೈ 16 ರಿಂದ 31 ವರೆಗೆ ಅತಿಸಾರ ತಡೆಗಟ್ಟುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಮಕ್ಕಳಲ್ಲಿ ಅತಿಸಾರ, ವಾಂತಿ, ಭೇದಿ ಕಂಡುಬಂದರೆ ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು. 05 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಓ.ಆರ್.ಎಸ್ 02 ಪಾಕೇಟ್ ಮತ್ತು ಅತಿಸಾರ ಉಂಟಾದ ಮಕ್ಕಳಿಗೆ ಜಿಂಕ್ ಮಾತ್ರೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ಸಂಘದ ಡಾ.ಪಾಲಾಕ್ಷಪ್ಪ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಅಭಿನವ್.ಡಿ.ಎಂ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್, ಬಸವೇಶ್ವರ ಮೆಡಿಕಲ್ ಕಾಲೇಜಿನ ಡಾ.ಲತಾ, ಡಾ.ಬಸವಂತಪ್ಪ, ವೈದ್ಯರಾದ ಡಾ.ಪೃಥ್ವೀಶ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ತಜ್ಞ ವೈದ್ಯರು ಮತ್ತು ವೈದ್ಯಾಧಿಕಾರಿಗಳು, ಖಾಸಗಿ ವೈದ್ಯರು ಹಾಜರಿದ್ದರು.




