ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ.
ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ!
ಆರೆಸ್ಸೆಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ ಆರೆಸ್ಸೆಸ್’ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ.
ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ ನಿಯಮಗಳಿಗೆ ಅನುಸಾರವಾಗಿ ಆರೆಸ್ಸೆಸ್ ತಮ್ಮ ಕಾರ್ಯಕ್ರಮ ನಡೆಸಬೇಕು. ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ.
– 300 ಜನರು ಮಾತ್ರ ಭಾಗವಹಿಸಬೇಕು.
– ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ
– ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ
– ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ
ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು.
ಜೈ ಸಂವಿಧಾನ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ




