ಬೆಂಗಳೂರು: ಅಸಹಜ ಸಾವುಗಳು ಸಂಭವಿಸಿವೆ ಎಂದು ಆರೋಪಿಸಲಾದ ಧರ್ಮಸ್ಥಳ ಪ್ರಕರಣದ ಬಗ್ಗೆ ನಡೆಯುತ್ತಿರುವ ಎಸ್‌ಐಟಿ ತನಿಖೆಯಲ್ಲಿ ಯಾವುದೇ ಲೋಪಗಳಿಲ್ಲ. ಹೀಗಾಗಿ ಇದನ್ನು ಎನ್‌ಐಎ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಎಸ್‌ಐಟಿ ತನಿಖೆಗೆ ತೊಂದರೆ ಮಾಡುವ ಉದ್ದೇಶ ಹೊಂದಿರುವಂತೆ ಕಂಡು ಬರುತ್ತಿದೆ ಎಂದರು.
ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ತಮನ್ನು ಭೇಟಿ ಮಾಡಿದ್ದರು. ಆದರೆ ಅವರು ಕೇವಲ ಎಸ್‌ಐಟಿ ವಿಚಾರಕ್ಕೆ ಮಾತ್ರ ಚರ್ಚೆ ಮಾಡಲು ಬರುವುದಿಲ್ಲ. ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಆಗಿರುವ ಅವರಿಗೆ ಸರ್ಕಾರ ಬೇರೆ ಬೇರೆ ಜವಾಬ್ದಾರಿಗಳನ್ನು ನೀಡಿರುತ್ತದೆ. ಆ ಕುರಿತು ಚರ್ಚೆ ಮಾಡಲು ಪ್ರಣಬ್ ಮೊಹಾಂತಿ ಬಂದಿದ್ದರು ಎಂದರು.
ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವ ಅಗತ್ಯ ಇಲ್ಲ ಎಂದು ಹಲವಾರು ಸಂದರ್ಭಗಳಲ್ಲಿ ಸ್ಪಷ್ಟಪಡಿಸಿದ್ದೇನೆ. ಬಿಜೆಪಿಯವರು ಅನೇಕ ರೀತಿಯಲ್ಲಿ ಒತ್ತಾಯ ಮಾಡುವ ಮೂಲಕ ಸ್ವರೂಪ ಬದಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರಕ್ಕೆ ಎನ್‌ಜಿಓ ಹಣ ಬಳಕೆಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯ ಫೇಮಾ ಮತ್ತು ಇತರ ಕಾಯ್ದೆಗಳ ಅಡಿ ತನಿಖೆ ಆರಂಭಿಸಿ ವಿಚಾರಣೆ ನಡೆಸುವುದಾದರೆ ನಮ್ಮ ಅಭ್ಯಂತರವಿಲ್ಲ. ಅವರು ಹಣಕಾಸಿನ ವಿಚಾರಗಳ ಕುರಿತು ತನಿಖೆ ಮಾಡುತ್ತಾರೆ. ಎಸ್‌ಐಟಿ ತನ್ನ ಪಾಲಿನ ಜವಾಬ್ದಾರಿಯನ್ನು ನಿಭಾಯಿಸುತ್ತದೆ ಎಂದರು.
ದೂರುದಾರ ಚಿನ್ನಯ್ಯ ಅವರು ನಿಯಮ 164ರ ಅಡಿ ನ್ಯಾಯಾಧೀಶರ ಮುಂದೆ ನೀಡಿರುವ ಹೇಳಿಕೆಗೆ ಸೀಮಿತವಾಗಿ ತನಿಖೆ ನಡೆಸುತ್ತಿದೆ ಎಂದರು.
ಧರ್ಮಸ್ಥಳದ ವಿರುದ್ಧ ಬಿಜೆಪಿ ಷಡ್ಯಂತ್ರ ಮಾಡಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿರುವುದು ನನಗೆ ಗೊತ್ತಿಲ್ಲ. ಅವರಿಗೆ ಬೇರೆ ರೀತಿಯ ಮಾಹಿತಿಗಳು ಇರಬಹುದು. ನಾನು ಜವಾಬ್ದಾರಿಯುತ ಸಚಿವನಾಗಿ ತನಿಖೆ ನಡೆಯುವ ಸಂದರ್ಭದಲ್ಲಿ ಬೇರೆ ರೀತಿಯ ಹೇಳಿಕೆ ನೀಡಲು ಬಯಸುವುದಿಲ್ಲ ಎಂದರು.
ಸೌಜನ್ಯ ಅವರ ಪ್ರಕರಣದಲ್ಲಿ ಬಿಜೆಪಿಯವರ ನಿಲುವುಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಸೌಜನ್ಯ ಅಪಹರಣವಾಗಿರುವುದನ್ನು ಕಣ್ಣಾರೆ ನೋಡಿದ್ದಾಗಿ, ಮಹಿಳೆ ಹೇಳಿಕೆ ನೀಡಿರುವುದನ್ನೂ ಎಸ್‌ಐಟಿ ಗಮನಿಸುತ್ತದೆ ಎಂದರು.




