ಬೆಂಗಳೂರು: ಬಳ್ಳಾರಿ ಕೊಪ್ಪಳ ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಹಲವಡೆ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡು ಆತಂಕ ಮೂಡಿಸಿದೆ. ಇದರಿಂದ ರೋಗಪೀಡಿತ ಕೋಳಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲಾಗುತ್ತಿದೆ ಇದರ ಬೆನ್ನಲ್ಲೇ ಕೋಳಿ ಸೇವನೆಯಿಂದ ರೋಗ ಬರುತ್ತದೆ ಎಂಬ ಭೀತಿ ನಿರ್ಮಾಣವಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈ ಆತಂಕ ಕುರಿತು ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಸಮಾಧಾನ ಹೇಳಿದ್ದಾರೆ.
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿವೆ. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆ ವಹಿಸಿದರೆ ಸಾಕು. ಕೋಳಿ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.




