ಬೆಳಗಾವಿ: ರಾಜ್ಯದಲ್ಲಿ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಅವಶ್ಯಕವಿರುವ ಲೈಸನ್ಸ್ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾದಲದ ಅಧಿವೇಶನದಲ್ಲಿ ಬಿಜೆಪಿಯ ನಾರಾಯಣ ಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಆರ್.ಬಿ.ತಿಮ್ಮಾಪುರ, ಹೊಸದಾಗಿ ಬಾರ್ ಅಂಗಡಿ ತೆರೆಯುವುದಾಗಲಿ, ಇಲ್ಲವೆ ಲೈಸನ್ಸ್ ನೀಡುವ ಪ್ರಸ್ತಾವನೆ ಇಟ್ಟುಕೊಂಡಿಲ್ಲ. ಈ ಸಂಬಂಧದ ಕೆಲವು ವದಂತಿಗಳಿಗೆ ಕಿವಿಗೊಡಬಾರದು ಎಂದರು.
ಗ್ರಾಮೀಣ ಭಾಗಗಳಲ್ಲಿ ಅಂಗಡಿ ಮತ್ತಿತರ ಕಡೆಗಳಲ್ಲಿ ಮದ್ಯದ ಅಂಗಡಿಗಳನ್ನು, ಮದ್ಯವನ್ನು ಮಾರಾಟ ಮಾಡುತ್ತಾರೆ. ಇದನ್ನು ತಪ್ಪಿಸಲು ಸಿಎಲ್-7ನಲ್ಲಿ ಕೆಲವು ವಿನಾಯಿತಿಗಳನ್ನು ನೀಡಲಾಗಿದೆಯೇ ಹೊರತು ಸರ್ಕಾರ ಮದ್ಯಪಾನಕ್ಕೆ ಎಲ್ಲಿಯೂ ಸರ್ಕಾರ ಉತ್ತೇಜನ ನೀಡಿಲ್ಲ ಎಂದು ಹೊಸ ಮದ್ಯದಂಗಡಿ ತೆರೆಯಲು ರಾಜ್ಯ ಸರ್ಕಾರ ಅವಕಾಶ ನೀಡಿದೆ ಎಂಬ ಆರೋಪದ ಕುರಿತು ಸ್ಪಷ್ಟೀಕರಣ ನೀಡಿದರು.




