ಮುದ್ದಹನುಮೇಗೌಡ ಪಕ್ಷಕ್ಕೆ ಬಂದರೆ ಅಭ್ಯಂತರವಿಲ್ಲ: ಪರಮೇಶ್ವರ್

2 years ago

ಬೆಂಗಳೂರು: ಮಾಜಿ ಸಂಸದ ಮುದ್ದ ಹನುಮೇಗೌಡ ಅವರು ನನ್ನನ್ನು ಸಹ ತುಮಕೂರಿನ ನಿವಾಸದಲ್ಲಿ ಭೇಟಿಯಾಗಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುದ್ದ ಹನುಮೇಗೌಡ ಅವರು ಪಕ್ಷಕ್ಕೆ ಸೇರ್ಪಡೆಯಾಗಲು ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದರು.

ಈ ಬಗ್ಗೆ ಒಮ್ಮತದಿಂದ ತೀರ್ಮಾನ ತೆಗೆದುಕೊಳ್ಳುತ್ತೇವೆ. ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದಿದ್ದು, ಜಿಲ್ಲೆಯ ನಾಯಕರು ತೀರ್ಮಾನ ಮಾಡುವಂತೆ ಹೇಳಿದ್ದಾರೆ ಎಂದು ಹೇಳಿದರು.

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ತುಮಕೂರಿನಿಂದ ಮುದ್ದಹನುಮೇಗೌಡ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಇದರಿಂದ ಕುಪಿತಗೊಂಡ ಅವರು ಪಕ್ಷದಿಂದ ದೂರವಾಗಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೂಡ ವಿಧಾನಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರು ಟಿಕೆಟ್ ಸಿಗದೇ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಸೇರಲು ಮುದ್ದಹನುಮೇಗೌಡ ಸಜ್ಜಾಗಿದ್ದಾರೆ.

Leave a Reply