ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ ವಿಚಾರ ದೊಡ್ಡ ಮಟ್ಟದ ಚರ್ಚೆಯಲ್ಲಿರುವಾಗಲೇ ಹಾಸನದ ಅರಸೀಕೆರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರಿಂದ ಮುಖ್ಯಮಂತ್ರಿಯ ಸ್ಥಾನವನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ ಹಾಗೂ ಅವರನ್ನು ಪದಚ್ಯುತ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ.
ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ‘ಹಾಲುಮತ ಸಮಾಜದವರ ಕೈಗೆ ಅಧಿಕಾರ ಬಂದರೆ ಅದನ್ನು ಬಿಡಿಸಿಕೊಳ್ಳುವುದು ಬಹಳ ಕಷ್ಟ. ವಿಜಯನಗರ ಸಾಮ್ರಾಜ್ಯ ಕಟ್ಟಿದ ಹಕ್ಕಬುಕ್ಕರು, ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಕಾಶಿಯ ರಾಣಿ ಅಹಲ್ಯಾಬಾಯಿ ಹೋಳ್ಕರ್ ಅವರು ಇದೇ ಪ್ರಾಚೀನ ಸಮಾಜಕ್ಕೆ ಸೇರಿದವರು. ಹಾಲುಮತ ಸಮಾಜವು ದೈವತ್ವಕ್ಕೆ ಹತ್ತಿರವಾದದ್ದು. ಅಂತಹ ಸಮಾಜದ ಮೊಟ್ಟಮೊದಲ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಸಿಕ್ಕಿದೆ, ಅವರನ್ನು ಇಳಿಸುವುದು ಸುಲಭವಲ್ಲ ಎಂದರು.
ಮುಖ್ಯಮಂತ್ರಿ ಬದಲಾವಣೆ ಕುರಿತು ಸ್ಪಷ್ಟನೆ ನೀಡಿದ ಅವರು, ‘ಯುಗಾದಿ ಹಬ್ಬದವರೆಗೂ ರಾಜ್ಯ ರಾಜಕೀಯದಲ್ಲಿ ಯಾವುದೇ ಬದಲಾವಣೆಗಳು ಆಗುವ ಲಕ್ಷಣಗಳಿಲ್ಲ ಎಂದರು.
ಸಿದ್ದರಾಮಯ್ಯ ಅವರು ಅವರಾಗಿಯೇ ಮನಸ್ಸು ಮಾಡಿ ಅಧಿಕಾರ ಬಿಟ್ಟುಕೊಟ್ಟರೆ ಮಾತ್ರ ಬೇರೆಯವರು ಮುಖ್ಯಮಂತ್ರಿಯಾಗಬಹುದು. ಯುಗಾದಿ ಕಳೆದ ನಂತರ ಈ ಬಗ್ಗೆ ಹೆಚ್ಚಿನ ವಿಚಾರಗಳನ್ನು ತಿಳಿಸುತ್ತೇನೆ ಎಂದರು.




