ಉನ್ನತ ಮಟ್ಟದ ಅಧಿಕಾರಿಯಾದ ಮಾತ್ರಕ್ಕೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಸಿದ್ದರಾಮಯ್ಯ

3 months ago

ಬೆಳಗಾವಿ: ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯರೊಂದಿಗೆ ಅನುಚಿತ ವರ್ತನೆ ತೋರಿರುವ ಬಗ್ಗೆ ಸೂಕ್ತ ವಿಚಾರಣೆ ನಡೆಸಿ, ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಉನ್ನತ ಮಟ್ಟದ ಅಧಿಕಾರಿಯಾದ ಮಾತ್ರಕ್ಕೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿಯವರೇ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಜೈಲಿಗೆ ಹೋಗಿ ಬಂದವರು. ಸರ್ವೋಚ್ಛ ನ್ಯಾಯಾಲಯದಲ್ಲಿ ಅವರ ಪ್ರಕರಣವಿನ್ನೂ ನಡೆಯುತ್ತಿದೆ. ಇವರಿಗೆ ಆರೋಪಿಸಲು ಯಾವುದೇ ನೈತಿಕ ಅಧಿಕಾರವಿಲ್ಲ ಎಂದರು.

ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುವುದರಲ್ಲಿ ನಿರತವಾಗಿದ್ದು, ಜನರನ್ನು ದಾರಿತಪ್ಪಿಸುತ್ತಿದ್ದಾರೆ. ಜನವರಿ 22 ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುತ್ತಿದ್ದು, ಹಾದಿಬೀದಿಯಲ್ಲಿ ಆರೋಪ ಮಾಡುವುದು ಬಿಟ್ಟು ಅಧಿವೇಶನದಲ್ಲಿ ವಿರೋಧ ಪಕ್ಷಗಳು ನೇರಾನೇರ ಚರ್ಚೆ ನಡೆಸಲಿ ಎಂದರು.

ಮಹಾರಾಷ್ಟ್ರ ಸರ್ಕಾರ ಗಡಿ ವಿವಾದ ಸಂಬಂಧ ಸಲ್ಲಿಸಿರುವ ಅರ್ಜಿಯ ವಿರುದ್ಧ ವಾದ ಮಂಡಿಸಲು ಕರ್ನಾಟಕ ಕಾನೂನು ತಂಡ ಸಿದ್ಧವಾಗಿದೆ. ರಾಜ್ಯದ ಗಡಿಯ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಮಹಾರಾಷ್ಟ್ರದ ಅಧಿಕಾರ ವ್ಯಾಪ್ತಿಗೆ ಬರುತ್ತದೆಯೇ ಎಂಬ ಬಗ್ಗೆಯೇ ನಮ್ಮ ಪ್ರಶ್ನೆಯಿದ್ದು, ಈ ವಿಚಾರ ಮೊದಲು ಇತ್ಯರ್ಥವಾಗಬೇಕು ಎಂದರು.

Leave a Reply