ಬೆಂಗಳೂರು: ನನ್ನ ವಿರುದ್ಧ ಹೆಣ್ಣುಮಗಳೊಬ್ಬಳು ದೂರು ನೀಡಿದ್ದು, ಎಫ್ಐಆರ್ ಕೂಡ ದಾಖಲಾಗಿದೆ. ಕಾನೂನು ಪ್ರಕಾರ ಅದನ್ನು ಎದುರಿಸುತ್ತೇನೆ. ಇದರಲ್ಲಿ ರಾಜಕೀಯ ಪಿತೂರಿ ಇದೆ ಎಂದು ಭಾವಿಸುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ತಮ್ಮ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಸುಮಾರು ಒಂದೂವರೆ ತಿಂಗಳ ಹಿಂದೆ ನನ್ನ ಮನೆಯ ಬಳಿ ತಾಯಿ–ಮಗಳು ಬಹಳ ಸಲ ಬಂದು ಹೋಗಿದ್ದರು. ಒಂದು ದಿನ ಕಣ್ಣೀರು ಹಾಕುತ್ತಾ ನಿಂತಿದ್ದರು. ಅವರನ್ನು ಕರೆಸಿ ಏನಮ್ಮ ಸಮಸ್ಯೆ ಎಂದು ಕೇಳಿದ್ದೆ. ತಮಗೆ ಅನ್ಯಾಯ ಆಗಿದೆ ಎಂದು ಹೇಳಿಕೊಂಡರು. ತಕ್ಷಣವೇ ಪೊಲೀಸ್ ಕಮಿಷನರ್ ದಯಾನಂದ ಅವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿ ಅವರ ಬಳಿ ಕಳಿಸಿದೆ. ಆದರೆ ಅವರು ನನ್ನ ಬಗ್ಗೆಯೇ ಏನೇನೋ ಹೇಳಲು ಶುರು ಮಾಡಿದರು ಎಂದರು.
ಈಗ ಬೇರೆ ರೀತಿಯಲ್ಲಿ ನನ್ನ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಕಷ್ಟ ಎಂದು ಹೇಳಿಕೊಂಡಾಗ ಹಣವನ್ನೂ ಕೊಟ್ಟು ಕಳಿಸಿದ್ದೆ. ಉಪಕಾರ ಮಾಡಲು ಹೋಗಿ ಏನೋ ಆಯಿತು. ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಕಾನೂನು ಪ್ರಕಾರವೇ ಎಲ್ಲವನ್ನು ಎದುರಿಸುತ್ತೇನೆ ಎಂದರು.




