ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

2 years ago

ಹಾವೇರಿ: ಹಾನಗಲ್ ನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ವಿಶೇಷ ತನಿಖಾ ತಂಡ ರಚನೆ ಸೇರಿದಂತೆ ಅಗತ್ಯವಿರುವ ತನಿಖೆಯ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಾವೇರಿ ಪ್ರವಾಸದ ವೇಳೆ ಅತ್ಯಾಚಾರ ಸಂತ್ರಸ್ತೆಯನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಹೇಳಿದರು.

ಸಂತ್ರಸ್ತೆ ಈಗ ತಾನೇ ಅರ್ಜಿ ಕೊಟ್ಟಿದ್ದಾರೆ. ಅದನ್ನು ಪರಿಗಣಿಸಲಾಗುವುದು. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆ ತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ ಎಂದರು.

ಸಂತ್ರಸ್ತೆಯನ್ನು ಭೇಟಿ ಮಾಡಿ ಬರುವುದು ಸಾಂತ್ವನ ಹೇಳುವುದು ಒಂದು ಭಾಗವಾದರೆ, ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ ಎಂದರು.

Leave a Reply