ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟೀಕರಣ ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ಆತಂಹ ಸಮಸ್ಯೆ ಏನೂ ಇಲ್ಲ ಎಂದರು.
ಈಗಾತಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದರು.
ಗೃಹಲಕ್ಷ್ಮಿ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದರು.
ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದರು.




