ರಾಜ್ಯಾದ್ಯಂತ ಕುಡಿಯುವ ನೀರಿಗೆ ಕೊರತೆ ಇಲ್ಲ, ಮೇವಿಗೂ ಬರ ಇಲ್ಲ: ಕೃಷ್ಣ ಬೈರೇಗೌಡ 

2 years ago

• ಬರ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ 7108 ಬೋರ್ವೆಲ್ಗಳನ್ನು ಗುರುತಿಸಲಾಗಿದೆ
• ಎಲ್ಲಾ ತಾಲೂಕುಗಳಲ್ಲೂ ಈವರೆಗೆ 600ಕ್ಕೂ ಅಧಿಕ ಟಾಸ್ಕ್ಫೋರ್ಸ್ ಸಭೆ
• 364 ಸರ್ಕಾರಿ ಸರ್ವೇಯರ್ ಹಾಗೂ 26 ಎಡಿಎಲ್ಆರ್ ನೇಮಕಾತಿಗೆ ಅಧಿಸೂಚನೆ
• ಬಾಕಿ ಪೋಡಿ ಹಾಗೂ ದುರಸ್ಥಿ ಪ್ರರಣಗಳ ಇತ್ಯರ್ಥಕ್ಕೆ ಖಡಕ್ ಸೂಚನೆ

ಬೆಂಗಳೂರು: ಪ್ರಸ್ತುತ ಬರ ಪರಿಸ್ಥಿತಿ ಹತೋಟಿಯಲ್ಲಿದ್ದು, ಮುಂದಿನ ಬೇಸಿಗೆಗೆ ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಉದ್ಭವಿಸದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ 7108 ಬಾಡಿಗೆ ಬೋರ್ವೆಲ್ಗಳನ್ನು ಗುರುತಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳ ಮಾಸಿಕ ಸಭೆಯ ನಡುವೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ನೀರಿನ ಸಮಸ್ಯೆ ಕಂಡುಬಂದಿರುವ 116 ಗ್ರಾಮಗಳಿಗೆ 175 ಟ್ಯಾಂಕರ್ ಮೂಲಕ ಹಾಗೂ 382ಗ್ರಾಮಗಳಿಗೆ 445 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಪ್ರತಿ ದಿನನೀರು ಪೂರೈಸಲಾಗುತ್ತಿದೆ. 09 ನಗರ ಸ್ಥಳೀಯ ಸಂಸ್ಥೆಗಳಲ್ಲಿನ 57 ವಾರ್ಡ್ಗಳಿಗೆ 24 ಟ್ಯಾಂಕರ್ ಗಳ ಮೂಲಕ ಹಾಗೂ 29 ವಾರ್ಡ್ಗಳಿಗೆ 17 ಖಾಸಗಿ ಬೋರ್ ವೆಲ್ ಗಳಮೂಲಕ ತುರ್ತು ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದರು.

ಅಲ್ಲದೆ, ಮುಂದಿನ ಬೇಸಿಗೆಯಲ್ಲಿಕುಡಿಯುವನೀರಿನಸಮಸ್ಯೆಉದ್ಬವಿಸಬಹುದಾದ 7377 ಗ್ರಾಮಗಳನ್ನು ಹಾಗೂ 1272 ವಾರ್ಡ್ ಗಳನ್ನು ಗುರುತಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಒಟ್ಟು 7080 ಖಾಸಗಿ ಬೋರ್ ವೆಲ್ಗಳನ್ನು ಗುರುತಿಸಲಾಗಿದೆ. ಬಹುತೇಕ ಬೋರ್ ವೆಲ್ ಮಾಲೀಕರ ಜೊತೆಗೆ ಈಗಾಗಲೇ ಒಪ್ಪಂದ ಮಾಡಿಕೊಂಡಿಕೊಳ್ಳಲಾಗಿದೆ. ಗ್ರಾಮಪಂಚಾಯತ್ ಮಟ್ಟದಲ್ಲಿ ಟ್ಯಾಂಕರ್ ಗಳ ಟೆಂಡರ್ ಮಾಡಿ ಇಟ್ಟುಕೊಳ್ಳಲು ಸೂಚಿಸಲಾಗಿದೆ. ಸಮಸ್ಯೆ ಕಂಡುಬಂದ ಕೂಡಲೇ ಕುಡಿಯುವ ನೀರನ್ನು ಪೂರೈಸಲಾಗುವುದು ಎಂದರು.

ನೀರಿನ ಪೂರೈಕೆ ಸರ್ಕಾರದ ಆದ್ಯತೆ. ಹೀಗಾಗಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಎಂಬ ನಿಟ್ಟಿನಲ್ಲಿ ಬಾಡಿಗೆ ಟ್ಯಾಂಕರ್ ಹಾಗೂ ಖಾಸಗಿ ಬೋರ್ವೆಲ್, ಟ್ಯಾಂಕರ್ ಗಳ ಮೂಲಕ ನೀರು ಪೂರೈಸುವವರಿಗೆ ಯಾವುದೇ ನೆಪ ಇಲ್ಲದೆ 15 ದಿನಗಳಲ್ಲಿ ಬಿಲ್ಲು ಪಾವತಿಗೆ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ವಾಟರ್ ಟ್ಯಾಂಕರ್ ಗಳಿಗೆ ನ್ಯಾಯಯುತ ದರ ನಿಗದಿಗೊಳಿಸುವ ಬಗ್ಗೆಯೂ ಸಿದ್ದತೆ ಆಗುತ್ತಿದೆ ಎಂದರು.

Leave a Reply