ಬೆಳಗಾವಿ: 2ಎ ಮೀಸಲಾತಿಗೆ ಪಂಚಮಸಾಲಿ ಸಮುದಾಯ ನಡೆಸಿದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿರುವುದನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಸಮರ್ಥಿಸಿಕೊಂಡಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಪ್ರತಿಭಟನಕಾರ ಮೇಲೆ ಏಕಾಏಕಿ ವಿನಾಕಾರಣ ನಾವು ಲಾಠಿಚಾರ್ಜ್ ಮಾಡಿಲ್ಲ. ಇದಕ್ಕೆ ಸಂಬಂಧಿಸಿ ನಮ್ಮ ಬಳಿಯೂ ವಿಡಿಯೋ ಹಾಗೂ ಫೋಟೋಗಳಿವೆ. ಪಂಚಮಸಾಲಿ ಹೋರಾಟಗಾರರು ಕಾನೂನು ಕೈಗೆತ್ತಿಕೊಂಡಿದ್ದರು. ಸ್ವತಃ ಸಿಎಂ ಹೋರಾಟ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದರು. ನಾವು ಸಚಿವರನ್ನು ಪ್ರತಿಭಟನೆ ಸ್ಥಳಕ್ಕೆ ಕಳುಹಿಸಿದಾಗಲೂ ಒಪ್ಪಲಿಲ್ಲ ಎಂದರು.
ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು. ಪಂಚಮಸಾಲಿ ಹೋರಾಟಗಾರರು ಮೊದಲು ಚಪ್ಪಲಿ, ಕಲ್ಲು ಎಸೆದರು. ಜಯಮೃತ್ಯುಂಜಯ ಶ್ರೀ ಸೇರಿ ಹಲವರು ಕಾನೂನು ಕೈಗೆತ್ತಿಕೊಂಡರು. ಮುತ್ತಿಗೆ ಹಾಕುತ್ತೇವೆ ಎಂದಾಗ ತಡೆಯುವುದು ಅನಿವಾರ್ಯ ಆಗಿತ್ತು ಎಂದರು.
ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೀಗೆ ಅವಕಾಶ ನೀಡಿದರೆ, ನಾಳೆ ಎಲ್ಲರೂ ಮುತ್ತಿಗೆ ಹಾಕಲು ಬರುತ್ತಾರೆ. ಕೋರ್ಟ್ ತಡೆಯಾಜ್ಞೆ ಇದ್ದಾಗಲೂ ನಿಯಮ ಉಲ್ಲಂಘನೆಯಾಗಿದೆ. ಜಯಮೃತ್ಯುಂಜಯ ಸ್ವಾಮೀಜಿ ಸೇರಿ ಎಲ್ಲರೂ ಉಲ್ಲಂಘಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋ ದಾಖಲೆಗಳಿವೆ ಎಂದರು.



