ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮೊದಲ ಹಂತದ ಮತದಾನ ನಡೆಯಲಿರುವ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಭರ್ಜರಿ ರೋಡ್ ಶೋ ಮೂಲಕ ಗಮನ ಸೆಳೆದರು. ಇವರೊಂದಿಗೆ ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳುವ ಮೂಲಕ ಅಖಾಡಕ್ಕೆ ಭರ್ಜರಿ ರಂಗು ತಂದರು.
ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು
ಯದುವೀರ್ ಕೃಷ್ಣ ರಾಜದತ್ತ ಒಡೆಯರ್, ಬಿಜೆಪಿ
ಬೆಂಗಳೂರು ಗ್ರಾಮಾಂತರ – ಡಿ.ಕೆ. ಸುರೇಶ್, ಕಾಂಗ್ರೆಸ್ಡಾ.ಸಿ.ಎನ್.ಮಂಜುನಾಥ್, ಬಿಜೆಪಿ
ಚಿಕ್ಕಬಳ್ಳಾಪುರ – ಡಾ.ಕೆ.ಸುಧಾಕರ್, ಬಿಜೆಪಿ
– ವಾಟಾಳ್ ನಾಗರಾಜ್
ಚಿತ್ರದುರ್ಗ – ಗೋವಿಂದ ಕಾರಜೋಳ, ಬಿಜೆಪಿ
ಬಿ.ಎನ್.ಚಂದ್ರಪ್ಪ, ಕಾಂಗ್ರೆಸ್
ಹಾಸನ – ಪ್ರಜ್ವಲ್ ರೇವಣ್ಣ, ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ
ಮಂಡ್ಯ – ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ
ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ, ಬಿಜೆಪಿ
ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ, ಬಿಜೆಪಿ
ಶಿವಮೊಗ್ಗ – ಬಿ.ವೈ.ರಾಘವೇಂದ್ರ, ಬಿಜೆಪಿ
ಶಿವಮೊಗ್ಗ – ಕೆ.ಎಸ್.ಈಶ್ವರಪ್ಪ, ಬಿಜೆಪಿ ಬಂಡಾಯ ನಾಯಕ
ಬೆಂಗಳೂರು ಉತ್ತರ – ರಾಜೀವ್ ಗೌಡ, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ
ತುಮಕೂರು – ಎಸ್.ಪಿ.ಮುದ್ದಹನುಮೇಗೌಡ, ಕಾಂಗ್ರೆಸ್
ಡಾ.ಸಿ.ಎನ್.ಮಂಜುನಾಥ್, ಬಿಜೆಪಿ
ಚಿಕ್ಕಬಳ್ಳಾಪುರ – ಡಾ.ಕೆ.ಸುಧಾಕರ್, ಬಿಜೆಪಿ
– ವಾಟಾಳ್ ನಾಗರಾಜ್
ಚಿತ್ರದುರ್ಗ – ಗೋವಿಂದ ಕಾರಜೋಳ, ಬಿಜೆಪಿ
ಬಿ.ಎನ್.ಚಂದ್ರಪ್ಪ, ಕಾಂಗ್ರೆಸ್
ಹಾಸನ – ಪ್ರಜ್ವಲ್ ರೇವಣ್ಣ, ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ
ಮಂಡ್ಯ – ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ
ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ, ಬಿಜೆಪಿ
ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ, ಬಿಜೆಪಿ
ಶಿವಮೊಗ್ಗ – ಬಿ.ವೈ.ರಾಘವೇಂದ್ರ, ಬಿಜೆಪಿ
ಶಿವಮೊಗ್ಗ – ಕೆ.ಎಸ್.ಈಶ್ವರಪ್ಪ, ಬಿಜೆಪಿ ಬಂಡಾಯ ನಾಯಕ
ಬೆಂಗಳೂರು ಉತ್ತರ – ರಾಜೀವ್ ಗೌಡ, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ
ತುಮಕೂರು – ಎಸ್.ಪಿ.ಮುದ್ದಹನುಮೇಗೌಡ, ಕಾಂಗ್ರೆಸ್
ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಂಸದ ಚಂದ್ರಪ್ಪ, ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಪ್ರಮುಖ ನಾಯಕರು ಅಬ್ಬರ ರೋಡ್ ಶೋ ಮತ್ತು ಶಕ್ತಿಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವರು ಸಾತ್ ನೀಡಿದರು.
ಮೊದಲ ಹಂತದಲ್ಲಿ ನಡೆಯಲಿರುವ ಲೋಕಸಭೆ ಕ್ಷೇತ್ರಗಳು
- ಬೆಂಗಳೂರು ದಕ್ಷಿಣ
- ಬೆಂಗಳೂರು ಕೇಂದ್ರ
- ಬೆಂಗಳೂರು ಉತ್ತರ
- ಬೆಂಗಳೂರು ಗ್ರಾಮಾಂತರ
- ಉಡುಪಿ-ಚಿಕ್ಕಮಗಳೂರು
- ಹಾಸನ
- ದಕ್ಷಿಣ ಕನ್ನಡ
- ಚಿತ್ರದುರ್ಗ
- ತುಮಕೂರು
- ಮಂಡ್ಯ
- ಮೈಸೂರು
- ಚಾಮರಾಜನಗರ
- ಚಿಕ್ಕಬಳ್ಳಾಪುರ
- ಕೋಲಾರ
ಮತದಾನದ ದಿನಾಂಕ: ಏಪ್ರಿಲ್ 26, 2024
ನಾಮಪತ್ರ ಸಲ್ಲಿಸಿದ ಬಳಿಕ ಕೆಲವರು ಕ್ಷೇತ್ರಗಳಲ್ಲಿ ಸಾರ್ವಜನಿಕ ಸಮಾವೇಶಗಳನ್ನು ನಡೆಸಿ ಅಭ್ಯರ್ಥಿಗಳ ಪರ ಪ್ರಚಾರ ಹಾಗೂ ಮತ ಯಾಚನೆ ಮಾಡಿದರು. ಈಗಾಗಲೇ ನಾಮಪತ್ರ ಸಲ್ಲಿಸಿದ್ದ ಕೆಲವು ಅಭ್ಯರ್ಥಿಗಳು ಅಬ್ಬರದ ರೋಡ್ ಶೋ ನಡೆಸಿ, ಶಕ್ತಿ ಪ್ರದರ್ಶನ ಮಾಡಿ ಮತ್ತೆ ನಾಮಪತ್ರ ಸಲ್ಲಿಸಿದರೆ, ಮತ್ತೆ ಕೆಲವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ ಹಾಜರಿದ್ದರು
ಒಟ್ಟಾರೆಯಾಗಿ 14 ಲೋಕಸಭಾ ಕ್ಷೇತ್ರಗಳಲ್ಲಿ 14 ಮಹಿಳೆಯರು ಸೇರಿದಂತೆ 268 ಜನ ನಾಮಪತ್ರ ಸಲ್ಲಿಸಿದ್ದು,ನಾಳೆ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ.



